ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗವು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇದೇ ತಿಂಗಳ ನವೆಂಬರ್ 10ರಂದು ‘ಫೋಟೊಗ್ರಫಿ ಕೌಶಲ್ಯಗಳ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ಕಾರ್ಯಕ್ರಮ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಭಾಗವಹಿಸುವಿಕೆ 100 ವಿದ್ಯಾರ್ಥಿನಿಯರಿಗೆ ಸೀಮಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ” ಎಂದಿದ್ದಾರೆ.
“ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿನಿಯರು ಈ ಲಿಂಕ್ https://docs.google.com/forms/d/e/1FAIpQLSeLKrCdwJWEkA5Ax_UNlkgH3sS_9vGwdNAXdJAOnm70x22jnA/viewform?usp=dialog ಬಳಸಿ ಹೆಸರು ನೋಂದಾಯಿಸಿಕೊಳ್ಳಬಹುದು” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮುರುಡೇಶ್ವರ | ರೈಲ್ವೇ ನಿಲ್ದಾಣದ ಬಳಿ ಮಂಗಳಮುಖಿಯರ ದಾಳಿ; ಕಾಲೇಜು ಸಿಬ್ಬಂದಿಯ ₹1 ಲಕ್ಷ ಮೌಲ್ಯದ ಚಿನ್ನದ ಸರ ಸುಲಿಗೆ
“ನೋಂದಣಿಗೆ ಇದೇ ತಿಂಗಳ 8ರಂದು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕ ಸಂದೀಪ್ ಮೊಬೈಲ್ ಸಂಖ್ಯೆ 9844681398ಕ್ಕೆ ಸಂಪರ್ಕಿಸಬಹುದು” ಎಂದು ತಿಳಿಸಿದ್ದಾರೆ.





