ವಿಜಯಪುರ | ಪಾಲಿಕೆ ವಿರುದ್ಧ ಆಕ್ರೋಶ : ಟಯರ್‌ʼಗೆ ಬೆಂಕಿ ಹಚ್ಚಿ ಪ್ರತಿಭಟನೆ

Date:

ವಿಜಯಪುರ ವಾರ್ಡ್ ನಂ:28 ರಲ್ಲಿ ಮಹಾನಗರ ಪಾಲಿಕೆ ವತಿಯಿಂದ ಆಗಬೇಕಾದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ನಗರ ಉಪಾಧ್ಯಕ್ಷ ಆಮೀರ್ ಸೊಹೈಲ್ ಪಟೇಲ್ ಅವರ ನೇತೃತ್ವದಲ್ಲಿ ಇಂದು ರಸ್ತೆ ತಡೆದು, ಟಯರ್ʼಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲಾಯಿತು.

ಕಳೆದ 10-12 ವರ್ಷಗಳಿಂದ ವಾರ್ಡಿನ ಜನತೆಗೆ ಮೂಲಭೂತ ಸೌಕರ್ಯಗಳಾದ ಶುದ್ಧ ನೀರು, ರಸ್ತೆ, ಬೀದಿ ದೀಪಗಳು ಹಾಗೂ ಸರಿಯಾದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಹತ್ತಾರು ಸಮಸ್ಯೆಗಳಿಂದ ಜನ ಹೈರಾಣಾಗಿದ್ದಾರೆ. ಬೀದಿ ನಾಯಿ ಮತ್ತು ದನಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಹಾಗೂ ಹಿರಿಯ ನಾಗರಿಕರು ಓಡಾಡಲು ಭಯಪಡುವಂತಾಗಿದೆ. ಆದರೂ ಪಾಲಿಕೆ ಕಣ್ಮುಚ್ಚಿ ಕೂತಿದೆ ಎಂದು ಹರಿಹಾಯ್ದರು.

WhatsApp Image 2025 01 07 at 5.31.49 PM

ಪ್ರತಿಭಟನೆ ವೇಳೆ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಅವರು, “ವಾರ್ಡಿನ ನಾಗರಬಾವಡಿ ಪ್ಲಾಟ್  ಹಾಗೂ ತಾಜುದ್ದೀನ್ ಹೋಟೆಲ್ ದಿಂದ ಸರ್ಕಾರಿ ಬಾಲಕಿಯರ ಶಾಲೆ ನಂ: 4 ರ ವರೆಗಿನ ರಸ್ತೆಗಳು ಅತಿಕ್ರಮಣಗೊಂಡಿದ್ದು, ಅತಿಕ್ರಮಣ ತೆರವುಗೊಳಿಸಿ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು” ಎಂದು ಪಾಲಿಕೆ ಆಯುಕ್ತರಿಗೆ ಮನವಿ ಕೊಡುವ ಮೂಲಕ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲನ ಬಂಧನ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...