ವಿಜಯಪುರ | ʼಬಸ್‌ ನಿಲ್ದಾಣಗಳ ಸ್ವಚ್ಛತೆ ಕಾಪಾಡುವಲ್ಲಿ ಪ್ರಯಾಣಿಕರೂ ಕೈಜೋಡಿಸಿʼ

Date:

ಎಲ್ಲಾ ಬಸ್ ನಿಲ್ದಾಣಗಳಲ್ಲೂ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಮತ್ತಷ್ಟು ಆದ್ಯತೆ ನೀಡಿ ಕ್ರಮ ವಹಿಸಲಾಗುತ್ತಿದೆ. ನಿಲ್ದಾಣಗಳ ಸ್ವಚ್ಛತೆ ಕಾಪಾಡುವಲ್ಲಿ ಪ್ರಯಾಣಿಕರೂ ಕೈಜೋಡಿಸಬೇಕು ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಮನವಿ ಮಾಡಿದ್ದಾರೆ.

“ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟ್‌ಲೈಟ್ ಬಸ್ ನಿಲ್ದಾಣ ಸೇರಿದಂತೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತವೆ. ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ಪ್ರಯಾಣಿಕ ಸ್ನೇಹಿ ಶೌಚಾಲಯ ನಿರ್ವಹಣೆಗಾಗಿ ಕಾರ್ಮಿಕ ಇಲಾಖೆಯಡಿ ನೋಂದಾಯಿತ ಗುತ್ತಿಗೆದಾರರಿಗೆ ಇ-ಟೆಂಡರ್ ಮೂಲಕ ಆಯ್ಕೆಮಾಡಿ ಪರವಾನಿಗೆ ನೀಡಲಾಗಿದೆ. ಪರವಾನಿಗೆದಾರರು ಪ್ರತಿ ನಿತ್ಯ ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವುದನ್ನು ಪರಿಶೀಲಿಸಲು ಸಹ ಕ್ರಮವಹಿಸಲಾಗಿದೆ” ಎಂದಿದ್ದಾರೆ.

“ಬಸ್ ನಿಲ್ದಾಣದ ಪರಿವೀಕ್ಷಣಾ ಸಮಯದಲ್ಲಿ ಸ್ವಚ್ಛತೆಯ ಬಗ್ಗೆ ನ್ಯೂನ್ಯತೆಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಸ್ವಚ್ಛತಾ ಪರವಾನಿಗೆದಾರರಿಗೆ ನೋಟಿಸ್ ಜಾರಿ ಮಾಡುವುದಲ್ಲದೇ ದಂಡ ಕೂಡ ವಿಧಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣಗಳಲ್ಲಿ ಮಣ್ಣಿನ ಮಡಿಕೆಗಳ ಮೂಲಕ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ತೀವ್ರ ಬಿಸಿಲಿನಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಇಂಡಸ್ಟ್ರಿಯಲ್ ಫ್ಯಾನ್‌ಗಳನ್ನು ಅಳವಡಿಸಲಾಗಿದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

“ಘನತ್ಯಾಜ್ಯ ವಿಲೇವಾರಿಗಾಗಿ ಡಸ್ಟ್ ಬಿನ್‌ಗಳನ್ನೂ ಅಳವಡಿಸಲಾಗಿದೆ. ಮಹಿಳಾ ವಿಶ್ರಾಂತಿ ಕೊಠಡಿ ಸೌಲಭ್ಯ ಹಾಗೂ ತಾಯಂದಿಯರ ಅನುಕೂಲಕ್ಕಾಗಿ ಹಾಲುಣಿಸುವ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊಬೈಲ್ ಚಾರ್ಜರ್ ಪಾಯಿಂಟ್ ಅಳವಡಿಸಲಾಗಿದೆ. ಬಸ್ ನಿಲ್ದಾಣವನ್ನು ಸ್ವಚ್ಛ ಮತ್ತು ಸುಂದರವಾಗಿ ನಿರ್ವಹಿಸಲು ಯೋಜನೆ ಸಿದ್ಧಪಡಿಸಿಕೊಂಡು ಆ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ. ತ್ಯಾಜ್ಯಗಳನ್ನು ಬಸ್ ನಿಲ್ದಾಣದ ಆವರಣದಲ್ಲಿ ಎಲ್ಲೆಂದರಲ್ಲಿ ಬಿಸಾಕದೇ ಡಸ್ಟ್‌ಬಿನ್ ಬಳಸಬೇಕು. ಬಸ್ ನಿಲ್ದಾಣಗಳನ್ನು ಸ್ವಚ್ಛವಾಗಿಡುವಲ್ಲಿ ಪ್ರಯಾಣಿಕರು ಸಹ ಕೈ ಜೋಡಿಸಬೇಕು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...