ವಿಜಯಪುರ | ಡಿ.7ರಂದು ಪಿಂಚಣಿದಾರರ ಅಹವಾಲು ಆಲಿಕೆ, ಅರ್ಹರಿಗೆ ಪಿಂಚಣಿ ಮಂಜೂರು: ಟಿ ಭೂಬಾಲನ್

Date:

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಡಿಸೆಂಬರ್‌ 7ರಂದು ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ನೀಡಿರುವ ಅವರು, ಡಿಸೆಂಬರ್‌ 7ರಂದು ಬೆಳಿಗ್ಗೆ 11 ಗಂಟೆಗೆ ತಾಳಿಕೋಟೆ ತಾಲೂಕಿನ ನೀರಲಗಿ ಗ್ರಾಮದ ಹೊಳೆ ಹುಚ್ಚೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪವಿಭಾಗಾಧಿಕಾರಿಗಳು, ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ದ್ಯಾವತರಾಯ ಮುತ್ಯಾ ದೇವಸ್ಥಾನದಲ್ಲಿ ವಿಜಯಪುರ ಗ್ರೇಡ್-2 ತಹಶೀಲ್ದಾರ್, ಅಳಗಿನಾಳ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ತಿಕೋಟಾ ಗ್ರೇಡ್-2 ತಹಶೀಲ್ದಾರ್, ಕಾಖಂಡಕಿ ಗ್ರಾಮ ಪಂಚಾಯಿತಿಯಲ್ಲಿ ಬಬಲೇಶ್ವರ ಗ್ರೇಡ್-2 ತಹಶೀಲ್ದಾರ್, ರೆಬಿನಾಳ ಗ್ರಾಮದ ಶ್ರೀಹನುಮಾನ ದೇವಸ್ಥಾನದಲ್ಲಿ ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಶಿಕಳವಾಡಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-2 ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುರಬರದಿನ್ನಿ ಸಭಾಭವನದಲ್ಲಿ ಕೊ‌ಲ್ಹಾರ ತಹಶೀಲ್ದಾರರು, ನಾಗಬೇನಾಳ ತಾಂಡಾದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ್, ನಾದ ಬಿ‌ ಕೆ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ಇಂಡಿ ಗ್ರೇಡ್-2 ತಹಶೀಲ್ದಾರ್, ಸಾತಲಗಾಂವ ಪಿಬಿಯ ಶಿವಯೋಗೇಶ್ವರ ದೇವಸ್ಥಾನದಲ್ಲಿ ಚಡಚಣ ಗ್ರೇಡ್-2 ತಹಶೀಲ್ದಾರ್, ಬೊಮ್ಮನಜೋಗಿ‌ ಹನುಮಾನ ದೇವಸ್ಥಾನದಲ್ಲಿ ದೇವರಹಿಪ್ಪರಗಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಜಟ್ನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಆಲಮೇಲ ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಅನುಭವ ಮಂಟಪ ವಚನ ವಿಶ್ವವಿದ್ಯಾಲಯದ ಕೇಂದ್ರವಾಗಲಿ : ಗೊ.ರು. ಚನ್ನಬಸಪ್ಪ

“ಪಿಂಚಣಿ ಅದಾಲತ್‌ನಲ್ಲಿ ಪರಿಗಣಿಸಬೇಕಾದ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...