ವಿಜಯಪುರ | ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ: ಸಚಿವ ಶಿವಾನಂದ ಪಾಟಿಲ್‌ ಭರವಸೆ

Date:

ಆಲಮಟ್ಟಿ ಉದ್ಯಾನದ ನಿರ್ವಹಣೆ ಕಾಮಗಾರಿಗೆ ಇ-ಟೆಂಡರ್ ನೀಡುವ ಪ್ರಕ್ರಿಯೆನ್ನು ಬಂದ್‌ ಮಾಡಿದೆ. ಫೆಬ್ರವರಿ ತಿಂಗಳ 24ರಂದು ಅಧಿವೇಶನ ಮುಗಿದ ನಂತರ ಸಂಭಂದಪಟ್ಟ ಅಧಿಕಾರಿಗಳ ಜತೆಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶಾಶ್ವತ, ಸೂಕ್ತವಾದ ತೀರ್ಮಾನ ತೆಗೆದುಕೂಳ್ಳಲಾಗುವುದು ಎಂದು ಸಚಿವ ಶಿವಾನಂದ ಪಾಟಿಲ್‌ ಅವರು ಭರವಸೆ ನೀಡಿದರು.

ವಿಜಯಪುರ ಜಿಲ್ಲೆಯ ಆಲಮಟ್ಟಿ ಗಾರ್ಡನ್‌ ಡಿ ಗ್ರೂಪ್‌ ನೌಕರರ ಸಂಘಟನೆಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಶುಕ್ರವಾರ 4ನೇ ದಿನದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಚಿವರು ಆಲಮಟ್ಟಿ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ದೂರವಾಣಿ ಕರೆ ಮೂಲಕ ತಿಳಿಸಿದರು.

ಸೂಪ‌ರ್ಡೆಂಟ್ ಎಂಜಿನಿಯರ್ ಡಿ ಬಸವರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಾಗಶೆಟ್ಟಿ, ವಲಯ ಅರಣ್ಯ ಅಧಿಕಾರಿ ಮಹೇಶ್ ಪಾಟಿಲ್‌ ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಸಚಿವರ ಭರವಸೆ ಮೇರೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮೂಂದೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಯುಟಿಯುಸಿ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಚ್ ಟಿ ಈ ದಿನ.ಕಾಮ್‌ನೊಂದಿಗೆ  ಮಾತನಾಡಿ “ಆಲಮಟ್ಟಿ ಉದ್ಯಾನದ ನಿರ್ವಹಣೆ ಕಾಮಗಾರಿಗೆ ಟೆಂಡರ್ ಕರೆದಿದ್ದರಿಂದ 22 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ 300ಕ್ಕೂ ಅಧಿಕ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಆಲಮಟ್ಟಿ ಗಾರ್ಡನ್‌ ಡಿ ಗ್ರೂಪ್‌ ನೌಕರರ ಸಂಘಟನೆಯಿಂದ ಫೆಬ್ರವರಿ 12ರಿಂದ ಮುಖ್ಯ ಎಂಜಿನಿಯರ್ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂಪಡೆಯಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ರಾಮನಗರ | ಜಾತಿ ನಿಂದನೆ ಆರೋಪ; 11 ಮಂದಿ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ

ದ್ಯಾಮಣ್ಣ ಬಿರಾದಾರ, ಬಾಸು ವಾಲಿಕಾರ, ಸಂಗಣ್ಣ ಯರನಾಳ, ಅನಿತಾ ಜಾದವ ಮೀನಾಕ್ಷಿ ರಾಠೋಡ, ಯಲ್ಲವ್ವ ಮೇಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...