ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

Date:

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದು, ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕುಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ)‌ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಆಗ್ರಹಿಸಿದೆ.

ಡಿವೈಎಫ್‌ಐ ವಿಜಯಪುರ ಜಿಲ್ಲಾ ಸಮಿತಿ ಅಧ್ಯಕ್ಷ ರಮೇಶ ಸಾಶನಾಳ ಪತ್ರಿಕೆ ಹೇಳಿಕೆ ನೀಡಿದ್ದು, “ಕರ್ನಾಟಕ ಸರ್ಕಾರವು ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದಾಗಿ ಪೆಟ್ರೋಲ್ ಬೆಲೆ 3 ರೂ, ಡಿಸೇಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ. 85 ರೂ 93 ಪೈಸೆಯಿದ್ದ ಡಿಸೇಲ್ ಬೆಲೆ 89 ರೂ. 20 ಪೈಸೆಗೆ ಏರಿಕೆಯಾಗಿದ್ದರೆ, 100 ರೂಪಾಯಿ ಇದ್ದ ಪೆಟ್ರೋಲ್ ದರ 103 ರೂ.ಗೆ ಹೆಚ್ಚಳಗೊಂಡಿದೆ” ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಪೆಟ್ರೋಲ್, ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ. ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನತೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ತೈಲ ಬೆಲೆ ಏರಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ”‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೆಟ್ರೋಲ್-ಡಿಸೇಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಜನತೆ ತೀವ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಡಿವೈಎಫ್ಐ ಜಿಲ್ಲಾ ಸಮಿತಿ ಪರವಾಗಿ ಎಚ್ಚರಿಕೆ ನೀಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ಸುದ್ದಿ ಓದಿದ್ದೀರಾ? ಗದಗ | ಲೋಕಾಯುಕ್ತ ಸಂಸ್ಥೆಯಲ್ಲಿ 40 ಪ್ರಕರಣ ದಾಖಲು; 22 ಪ್ರಕರಣಗಳು ಇತ್ಯರ್ಥ

ಡಿವೈಎಫ್ಐ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಗಣೇಶ್ ದಾಸ್ ಕೂಡಾ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಡಿಸೇಲ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಗದಗ ಮತ್ತು ಹಾವೇರಿಯಲ್ಲಿಯೂ ಡಿವೈಎಫ್ಐ ಖಂಡನೆ ಮಾಡಿದ್ದು, ಪೆಟ್ರೋಲ್ ಡಿಸೇಲ್ ದರ ಇಳಿಸಲು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...