ವಿಜಯಪುರ | ಪೊಲೀಸ್‌ ಪೇದೆ ಸಮಯ ಪ್ರಜ್ಞೆ; ಮೂವರು ಪ್ರಾಣಾಪಾಯದಿಂದ ಪಾರು

Date:

ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದ ಪೊಲೀಸ್‌ ಪೇದೆಯೊಬ್ಬರು ಪ್ರಾಣಾಪಾಯದಿಂದ ಮೂವರನ್ನು ರಕ್ಷಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.

ನಗರದ ಬಸವೇಶ್ವರ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಹೆಡ್‌ ಕಾನ್ಸ್ಟೇಬಲ್ ಇಬ್ರಾಹಿಂ ಅವಟಿ ಅವರ ಸಮಯ ಪ್ರಜ್ಞೆಯಿಂದ ಮೂವರ ಜೀವ ಉಳಿದಿದೆ. ವೃತ್ತದ ಬಳಿಯ ರಸ್ತೆಯಲ್ಲಿ ಕಡಿ ತುಂಬಿದ ಟಿಪ್ಪರ್‌ ಲಾರಿಯೊಂದು ವೇಗವಾಗಿ ಬರುತ್ತಿತ್ತು. ಅದನ್ನು ಗಮನಿಸದೇ ವೃದ್ಧ ದಂಪತಿ ಮತ್ತು ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದರು. ಇದನ್ನು ಗಮನಿಸಿದ ಪೇದೆ ಆ ಮೂವರನ್ನೂ ರಸ್ತೆ ಬದಿಗೆ ನೋಕಿದ್ದಾರೆ. ಮೂವರೂ ರಸ್ತೆ ಬದಿಗೆ ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಿಪ್ಪರ್‌ನ ಟಯರ್‌ ಸ್ಫೋಟಗೊಂಡು ಟಯರ್‌ನ ಚೂರು ಇಬ್ರಾಹಿಂ ಅವರ ಕಾಲಿಗೆ ತಗುಲಿ ಗಾಯವಾಗಿದೆ. ಇಬ್ರಾಹಿಂ ಅವರ ಸಮಯಪ್ರಜ್ಞೆಗೆ ಪೊಲೀಸ್‌ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...