ವಿಜಯಪುರ | ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಡಬೇಕು: ಅರವಿಂದ ಕುಲಕ‌ರ್ಣಿ

Date:

ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 149 ಎಕರೆಗೆ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಈ ತರ ವ್ಯವಸ್ಥೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಇಲ್ಲ. ಹಾಗಾಗಿ ಸರ್ಕಾರ ಪಿಪಿಪಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿಯನ್ನು ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕ‌ರ್ಣಿ ಹೇಳಿದರು.

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಉದ್ದೇಶಿಸಿ ಮಾತನಾಡಿದರು.

ಹಿರಿಯ ಪತ್ರಕರ್ತ ಅನಿಲ ಹೊಸಮನಿ ಮಾತನಾಡಿ, “ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಆರಂಭವಾದರೆ ಅಲ್ಲೇ ಬಡ ಮತ್ತು ಮಧ್ಯಮ ವರ್ಗದ ಹಾಗೂ ಜನಸಾಮಾನ್ಯರ ಮಕ್ಕಳು ಕಲಿಯಲು ಸಾಧ್ಯವಾಗುವುದಿಲ್ಲ. ಇದು ಮುಂದೆ ಕ್ರಮೇಣ ಸಂಪೂರ್ಣ ಖಾಸಗೀಕರಣಗೊಂಡು ಬಡವರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಆದ್ದರಿಂದ ನಾವೆಲ್ಲರೂ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಮುನ್ನಡೆಯಬೇಕಾಗುತ್ತದೆ. ಹಂತ ಹಂತವಾಗಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ. ಪಿಪಿ ಮಾದರಿಯನ್ನು ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಸಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ; ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಖಂಡನೆ

ಈ ವೇಳೆ ಅಣ್ಣಾರಾಯ ಇಳಗೆರಿ, ಜಗದೀಶ ಸೂರ್ಯವಂಶಿ, ಸುರೇಶ ವಬಿಜಾಪುರ, ಶ್ರೀನಾಥ ಪೂಜಾರಿ, ಅಕ್ರಮ ಮಾಶಾಳಕರ, ಮಲ್ಲಿಕಾರ್ಜುನ ಕೆಂಗನಾಳ, ಲಲಿತಾ ಜಗದೇವ ಸೂರ್ಯವಂಶಿ, ದಸ್ತಗಿರಿ ಉಕ್ಕಲಿ, ಗೀತಾ ಎಚ್, ಮಹಾದೇವಿ ಧರ್ಮಶೆಟ್ಟಿ, ಮಲ್ಲಿಕಾರ್ಜುನ ಬಟಗಿ, ಬಾಬು ರಾವ್ ವೀರಕಬ್ಬಿ, ಪ್ರಭುಗೌಡ ಪಾಟೀಲ, ಅಬ್ದುಲ್ ರೆಹಮಾನ ನಾಸಿರ್, ಸಿದ್ದನಗೌಡ ಪಾಟೀಲ, ಲಕ್ಷ್ಮಣ ಕಂಬಾಗಿ, ರೆಹಮಾನ್, ನೀಲಾಂಬಿಕೆ ಬಿರಾದಾರ, ಬಸೀರ್ ಅಹಮದ್ ತಾಂಬೆ, ಲಕ್ಷ್ಮಣ ಹಂದ್ರಾಳ, ಸಿಸ್ಟರ್ ಸೆಂಥಿಯ ಪೇರಾರಿ, ಶೋಭಾ ವಾಲೆಕಾರ, ರೇಣುಕಾ ಕಟ್ಟಿಮನಿ, ಜಯಶ್ರೀ ಚಲವಾದಿ, ಸುನಿತಾ ಮೋರೆ ಹಾಗೂ ಸರೋಜ ಕಟ್ಟಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...