ವಿಜಯಪುರ | ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಭೆ

Date:

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರಿ ಇಲಾಖೆಯೊಂದಿಗೆ ದೌರ್ಜನ್ಯ ತಡೆ ಸಮಿತಿಯೂ ಇದೆ. ಅಧ್ಯಕ್ಷರು ಹಾಗೂ ಸೌಜನ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು ನಮ್ಮೊಂದಿಗೆ ಸಹಕರಿಸಬೇಕು, ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅನುರಾಧ ವಸ್ತ್ರದ ತಿಳಿಸಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಿನಿ ಆಡಳಿತಸೌಧ ಸಭಾ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮೇಲ್ಪಂಕ್ತಿಗೆ ಬರಬೇಕು. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳಿದ್ದರೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೌರ್ಜನ್ಯ ಸಮಿತಿ ಅಧ್ಯಕ್ಷ ಬಾಬು ಗುಡಮಿ ಮಾತನಾಡಿ, “ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಾಕಷ್ಟು ಇವೆ. ತಾಲೂಕಿನಾದ್ಯಂತ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ. ಅಧಿಕಾರಿಗಳು ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಲು ವಿನಂತಿಸಿದ್ದಾರೆ. ಅಥರ್ಗಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಇಲ್ಲ. ಇದನ್ನು ಕೂಡಲೇ ಮಂಜೂರು ಮಾಡಬೇಕು” ಎಂದು ವಿನಂತಿಸಿದರು.

ಇದನ್ನೂ ಓದಿದ್ದೀರಾ? ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಸಭೆಯಲ್ಲಿ ಹಲವು ಸಮಸ್ಯೆಗಳನ್ನು ಸಮಿತಿ ಪದಾಧಿಕಾರಿಗಳು ಪ್ರಸ್ತಾಪಿಸಿದರು. ಅವುಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದೆಂದು ಅಧಿಕಾರಿಗಳು ಉತ್ತರಿಸಿದರು.

ಈ ವೇಳೆ ಶಿವಾನಂದ ಮೂರುಮನ್, ತಶೀಲ್ದಾರ್ ಬಿ ಎಸ್ ಕಡಕಬಾವಿ, ತಾಪಂ ಇಒ ನಂದೀಪ್ ರಾಠೋಡ, ಡಿವೈಎಸ್‌ಪಿ ಜಗದೀಶ್ ಎಸ್ ಎಚ್, ಸಮಾಜ ಕಲ್ಯಾಣ ತಾಲೂಕು ಅಧಿಕಾರಿ ಉಮೇಶ್ ಲಮಾಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...