ವಿಜಯಪುರ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲನ ಬಂಧನ

Date:

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸಚಿನ್ ಕುಮಾರ್ ಪಾಟೀಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ನೀಡಿರುವ ದೂರಿನ ಮೇರೆಗೆ ಆರೋಪಿ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಕಳೆದ ಜುಲೈನಲ್ಲಿ ಈ ಕೃತ್ಯ ನಡೆದಿದೆ. ಇದೀಗ ಜನವರಿ 2ರಂದು ವಿದ್ಯಾರ್ಥಿನಿಯರು ಮನಗೂಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಪ್ರಾಂಶುಪಾಲ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟುವುದು ಹಾಗೂ ಅಪ್ಪಿಕೊಳ್ಳುತ್ತಿದ್ದ. ಪ್ರತಿರೋಧಿಸಿದರೆ, ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಾಂಶುಪಾಲನ ಕಿರುಕುಳದಿಂದಾಗಿ ವಿದ್ಯಾರ್ಥಿನಿಯೊಬ್ಬಳು ಒಮ್ಮೆ ಅರ್ಧಕ್ಕೆ ಕಾಲೇಜು ಬಿಟ್ಟು ಬಂದಿದ್ದಳು. ಅಲ್ಲದೇ, ಮೊದಲ ಸೆಮಿಸ್ಟರ್ ಪರೀಕ್ಷೆಯಲ್ಲಿ ಉದ್ದೇಶಪೂರ್ವಕವಾಗಿ ಒಂದು ವಿಷಯದಲ್ಲಿ ಫೇಲ್ ಮಾಡಲಾಗಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಸಹಕರಿಸಿದರೆ, ಕಾಲೇಜಿಗೆ ಟಾಪರ್ ಮಾಡುತ್ತೇನೆ. ಮುಂದೆ ಉದ್ಯೋಗ ಪಡೆಯಲು ನೆರವಾಗುವುದಾಗಿ ಹೇಳುತ್ತಿದ್ದ. ಜತೆಗೆ ಈ ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್ ಸಹ ಮಾಡುತ್ತಿದ್ದ. ಮತ್ತೊಬ್ಬ ವಿದ್ಯಾರ್ಥಿನಿಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಹೋದಾಗಲೂ ಕಿರುಕುಳ ನೀಡಲಾಗಿತ್ತು ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಕರ್ನಾಟಕ-50’ ಸಂಚಿಕೆ | ‘ಮುಸ್ಲಿಮರೊಂದಿಗೆ ಮುಖಾಮುಖಿ’- ಮುಜಾಫರ್ ಅಸ್ಸಾದಿ ಅವರ ಬರಹ

ಈ ದೂರಿನ ಆಧಾರದಡಿ ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...