ವಿಜಯಪುರ | ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಖಂಡಿಸಿ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ 84ನೇ ದಿನಕ್ಕೆ ಕಾಲಿಟ್ಟಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಸದಸ್ಯರು ಶಾಸಕರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಹೋರಾಟಗಾರರ ಅವಮಾನಿಸಿದ ನಗರ ಶಾಸಕರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, “ಶಾಸಕರು ಕೂಡಲೇ ಹೇಳಿಕೆ ವಾಪಸ್ ತೆಗೆದುಕೊಂಡು ಜಿಲ್ಲೆಯ ಹೋರಾಟಗಾರರಿಗೆ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, “ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಕಳೆದ 84 ದಿನಗಳಿಂದ ವಿವಿಧ ಸಂಘಟನೆಗಳ ನಾಯಕರು ಹಾಗೂ ವಿಜಯಪುರ ಜಿಲ್ಲೆಯ ನಾಗರಿಕರು ಹೋರಾಟ ನಡೆಸುತ್ತಿದ್ದೇವೆ. ಇದನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೋರಾಟದಲ್ಲಿ ಕುಳಿತಿರುವವರನ್ನು ಶಿವಾನಂದ ಪಾಟೀಲರು ತಂದು ಕೂರಿಸಿದ್ದಾರೆ. ಅವರಿಗೆ ಸಂಜೆಯಾದ ಕೂಡಲೇ ದುಡ್ಡು ಕೊಟ್ಟು ಕಳುಹಿಸುತ್ತಾರೆ. ಹೋರಾಟದಲ್ಲಿ ಕುಳಿತಿರುವವರು ಯಾರೂ ಹೋರಾಟಗಾರರಲ್ಲವೆಂದು ಹೇಳುತ್ತಿರುವುದು ಅತ್ಯಂತ ಖಂಡನೀಯ” ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೋರಾಟ ಮಾಡುವುದು ನಮ್ಮ ಹಕ್ಕು. ಇಲ್ಲಿ ಯಾರೂ ನಮ್ಮನ್ನು ಕರೆದುಕೊಂಡು ಬಂದು ಕೂರಿಸಿಲ್ಲ. ನಾವೆಲ್ಲ ದಿನಾಲೂ ಬೇರೆ ಬೇರೆ ಹಳ್ಳಿ ಮತ್ತು ಪಟ್ಟಣಗಳಿಂದ ಸ್ವಂತ ಹಣ ಖರ್ಚು ಮಾಡಿಕೊಂಡು ಬಂದು ಹೋರಾಟ ನಡೆಸುತ್ತಿದ್ದೇವೆ. ಸ್ವಇಚ್ಛೆಯಿಂದ ಹೋರಾಟ ಪ್ರಾರಂಭಿಸಿದ್ದೇವೆ. ಇಲ್ಲಿ ನಾವೆಲ್ಲರೂ ಜಿಲ್ಲೆಯ ಹಿತಾಸಕ್ತಿಗೋಸ್ಕರ ಹೋರಾಟಕ್ಕಿಳಿದಿದ್ದೇವೆ. ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಕುಟಿಕಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪಾಳಾ ಗ್ರಾಮ ಪಂಚಾಯತ್ ಕರ ಸಂಗ್ರಹಣೆಯಲ್ಲಿ ಶೇ.100ರಷ್ಟು ಸಾಧನೆ

ಅನಿಲ ಹೊಸಮನಿ, ಮಲ್ಲಿಕಾರ್ಜುನ ಬಟಗಿ, ಅಕ್ರಂ ಮಾಶಾಳಕರ, ಸುರೇಶ ಬಿಜಾಪುರ, ಸಿದ್ದರಾಮಯ್ಯ ಹಳ್ಳುರ, ಎಸ್ ಎಂ ಗುರಿಕಾರ, ಶ್ರೀಕಾಂತ ಕೊಂಡಗುಳಿ, ಭರತ್ ಕುಮಾರ್ ಎಚ್ ಟಿ, ಜಗದೇವ ಸೂರ್ಯವಂಶಿ, ಸಿ ಬಿ ಪಾಟೀಲ, ಸುಶೀಲ ಮಿಣಜಿಗಿ, ಜ್ಯೋತಿ ಮೆಣಜಗಿ, ಶಿವಬಾಳಮ್ಮ ಕೊಂಡಗುಳಿ, ಗೀತಾ ಎಚ್, ಶಿವರಂಜನಿ, ಕಾವೇರಿ ರಜಪೂತ, ನೀಲಾಂಬಿಕ ಬಿರಾದಾರ, ಬಾಳು ಜೇವೂರ, ಸಲಿಮ ವಕ್ರಾಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...