ವಿಜಯಪುರ | ಫುಟ್ಪಾತ್‌ ಮೇಲಿನ ಅಂಗಡಿಗಳ ತೆರವು; ಪುರಸಭೆ ನಡೆ ವಿರೋಧಿಸಿ ದಸಂಸ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಪುರಸಭೆ ಅಧಿಕಾರಿಗಳು ಫುಟ್ಬಾತ್ ಮೇಲಿನ ಅನಧಿಕೃತ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಚರಣೆ ನಡೆಸಿದ್ದಾರೆ.

ಪುರಸಭೆ ಮುಖ್ಯ ಅಧಿಕಾರಿ ರುದ್ರೇಶ್ ಛತ್ತರಗಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದ ಬಸ್ ನಿಲ್ದಾಣದ ಮುಂಭಾಗ, ಮುದ್ದೇಬಿಹಾಳ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಪಿ ಐ ಗುರುಶಾಂತ್ ದಾಶಾಲ್ ಪೊಲೀಸ್ ಭದ್ರತೆ ಒದಗಿಸಿದ್ದರು. ಇನ್ನು ಇದೇ ಸಂದರ್ಭದಲ್ಲಿ ಅನಧಿಕೃತ ಅಂಗಡಿಗಳನ್ನು ವಶಕ್ಕೆ ಪಡೆಯಲಾಯಿತು.

ಈ ವೇಳೆ ರುದ್ರೇಶ್ ಛತ್ತರಗಿ ಮಾತನಾಡಿ, “ಪುರಸಭೆಯಿಂದ 2-3 ಬಾರಿ ಫುಟ್ಪಾತ್‌ ತೆರವು ಕಾರ್ಯಾಚರಣೆ ಮಾಡಲಾಗಿತ್ತು. ಮತ್ತೆ ಕೆಲವರು ಇಲ್ಲೇ ಅಂಗಡಿ ಹಾಕಿದ್ದರು. ಇದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಮೇಘ ಮಾರುಕಟ್ಟೆ ಪಕ್ಕದಲ್ಲಿ ಅಂಗಡಿ ಹಾಕಲು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಫುಟ್ಪಾತ್‌ ಮೇಲೆ ಅಂಗಡಿ ಹಾಕಿದರೆ ಅಂತವರ ಅಂಗಡಿ ಸೀಜ್ ಮಾಡಿ ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರವು ವಿರೋಧಿಸಿ ಪ್ರತಿಭಟನೆ:

ಬೆಳ್ಳಂ ಬೆಳಗ್ಗೆ ನಡೆದ ತೆರವು ಕಾರ್ಯಚರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ದಸಂಸ ಮುಖಂಡ ಅಶೋಕ ಚಲವಾದಿ, “ಪಟ್ಟಣದಲ್ಲಿ ಕೆಲ ಗಣ್ಯ ವರ್ತಕರು ಸೇಫ್ಟಿ ಮಾಡಿಕೊಂಡಿದ್ದಾರೆ. ಪುರಸಭೆ ಮುಖ್ಯ ಅಧಿಕಾರಿಗಳು ಅವರನ್ನೆಲ್ಲ ಬಿಟ್ಟು ಬಡ ವ್ಯಾಪಾರಸ್ಥರ ಮೇಲೆ ದೌರ್ಜನ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮುಖ್ಯ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ತಹಶೀಲ್ದಾರರ ಕಚೇರಿ ಮುಂಭಾಗದಲ್ಲಿ ಆಹೋರಾತ್ರಿ ಧರಣಿ ನಡೆಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಪ್ರತಿಭಟನೆಯಲ್ಲಿ ಪರಶುರಾಮ ದಿಂಡಿವಾರ, ಗುರು ಗುಡಿಮನಿ, ಮಹಾಂತೇಶ ಚಕ್ರವರ್ತಿ, ಗಂಗಾಧರ ಆರ್ಯರ, ಮಹೇಶ ಕೊಡಗಾನೂರ, ಯಮನೂರಿ ಚಲವಾದಿ, ಸಂತೋಷ ದಳಪತಿ, ಚಂದ್ರಶೇಖರ ನಾಲತವಾಡ, ಪ್ರಶಾಂತ ಭೂತನಾಳ, ಮುತ್ತು ಬೀದರಿ, ರವಿ ಮ್ಯಾಗೇರಿ, ಚಿದಾನಂದ ಪರನಾಕರ, ಸಂಜೆಯ ಬಿಸನಾಳ, ಲಕ್ಷ್ಮಣ ಹಲ್ಯಾಳ ಹಾಗೂ ಸಂಗಪ್ಪ ಛಲವಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...