ವಿಜಯಪುರದ ಖ್ಯಾತ ನೇತ್ರ ತಜ್ಞ, ಜಮಾಅತೆ ಇಸ್ಲಾಮಿ ಹಿಂದ್‌ ಹಿರಿಯ ನಾಯಕ ಡಾ. ಎಂ ಜೆ ಇನಾಮ್‌ದಾರ್ ನಿಧನ

Date:

ವಿಜಯಪುರದ ಖ್ಯಾತ ನೇತ್ರ ತಜ್ಞರು ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನ ಹಿರಿಯ ನಾಯಕರೂ ಆಗಿದ್ದ ಡಾ. ಎಂ ಜೆ ಇನಾಮ್‌ದಾರ್ ನಿಧನರಾಗಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿಯ ಸದಸ್ಯರಾಗಿ, ಶಾಂತಿ ಪ್ರಕಾಶನದ ಟ್ರಸ್ಟಿಯಾಗಿ ಮತ್ತು ಸನ್ಮಾರ್ಗ ಪತ್ರಿಕೆಯ ಆರಂಭಕಾಲದ ಓದುಗರು, ಬರಹಗಾರರೂ ಆಗಿ ಚಿರಪರಿಚಿತರಾಗಿದ್ದ ಇನಾಮ್‌ದಾರ್‌(79) ಅವರು ಕವಿಯೂ ಸಾಹಿತಿಯೂ ಆಗಿದ್ದರು.

ʼಆಹಾರ, ಅಹಿಂಸೆ, ಧರ್ಮʼ ಎಂಬ ಅವರ ಕೃತಿ ಭಾರೀ ಸಂಖ್ಯೆಯ ಓದುಗರನ್ನು ಆಕರ್ಷಿಸಿತ್ತು. ʼನ್ಯಾಯದ ವ್ಯವಸ್ಥೆʼ ಎಂಬ ಅವರ ಕೃತಿಯೂ ಜನಪ್ರಿಯವಾಗಿತ್ತು. ಈ ಎರಡೂ ಕೃತಿಗಳನ್ನು ಶಾಂತಿ ಪ್ರಕಾಶನ ಪ್ರಕಟಿಸಿತ್ತು. ಸನ್ಮಾರ್ಗ ಪತ್ರಿಕೆಗೆ ಬಿಜಾಪುರ ಜಿಲ್ಲೆಯಲ್ಲಿ ದೊಡ್ಡಮಟ್ಟದ ಓದುಗರನ್ನು ಒದಗಿಸಿಕೊಟ್ಟಿದ್ದ ಅವರು ತನ್ನ ಗಝಲ್ ಮೂಲಕ ಜನಪ್ರೀತಿ ಗಳಿಸಿಕೊಂಡಿದ್ದರು. ಮುಖ್ಯವಾಗಿ ಲಿಂಗಾಯತ ಸಮುದಾಯ ಮತ್ತು ಮುಸ್ಲಿಂ ಸಮುದಾಯದ ನಡುವಿನ ಸೌಹಾರ್ದದ ಕೊಂಡಿಯಾಗಿ ಅವರು ಪಾತ್ರ ನಿಭಾಯಿಸುತ್ತಿದ್ದರು. ಒಳ್ಳೆಯ ಭಾಷಣಗಾರರೂ ಆಗಿದ್ದ ಅವರಿಗೆ ನಾಡಿನಾದ್ಯಂತ ದೊಡ್ಡ ಮಟ್ಟದ ಓದುಗರು ಮತ್ತು ಅನುಯಾಯಿಗಳೂ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂ ಜೆ ಇನಾಮ್‌ದಾರ್‌ ಅವರ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಬೆಳಗಾಮಿ ಮುಹಮ್ಮದ್ ಸಾದ್, ಕಾರ್ಯದರ್ಶಿ ಯೂಸುಫ್ ಕನ್ನಿ, ಅಕ್ಬರ್ ಅಲಿ ಉಡುಪಿ, ಮುಹಮ್ಮದ್ ಕುಂಞಿ, ಮಾಜಿ ರಾಜ್ಯಾಧ್ಯಕ್ಷ ಅಥರುಲ್ಲಾ ಶರೀಫ್ ಸಹಿತ ಬಹುತೇಕ ಮುಖಂಡರು ಸಂತಾಪ ಸೂಚಿಸಿದ್ದು, ಅವರ ಅನುಪಸ್ಥಿತಿಯನ್ನು ತಾಳಿಕೊಳ್ಳುವ ಶಕ್ತಿಯನ್ನು ಅಲ್ಲಾಹನು ಕುಟುಂಬಿಕರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಕ್ಷಣ ಸುಧಾರಣೆಗೆ ವಿಷಯವಾರು ಶಿಕ್ಷಕರ ನೇಮಕಕ್ಕೆ ಪ್ರತಿಭಟನೆ

ಡಾ. ಇನಾಮ್‌ದಾರ್‌ ಅವರು ಪತ್ನಿ, ಆರು ಹೆಣ್ಣುಮಕ್ಕಳು ಮತ್ತು ಓರ್ವ ಮಗನನ್ನು ಅಗಲಿದ್ದಾರೆ. ಅಲ್ಲಾಹನು ಅವರಿಗೆ ಮಗ್ ಫಿರತ್ ಮತ್ತು ಮರ್ಹಮತ್ ನೀಡಿ ಅನುಗ್ರಹಿಸಲೆಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...