ವಿಜಯಪುರ | ಎಲ್ಲ ಗ್ರಾಮ ಪಂಚಾಯತಿಗಳಿಗೆ ಪಿಡಿಒ ನೇಮಕಕ್ಕೆ ಮನವಿ

Date:

ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸುವ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಜಿಲ್ಲಾ ಪದಾಧಿಕಾರಿಗಳ ಜತೆಗೆ ಜಿಲ್ಲೆಯ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ ನಿಗಧಿಪಡಿಸುವಂತೆ ಕರ್ನಾಟಕ ರಾಜ್ಯ ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದಿಂದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

“ವಿಜಯಪುರ ಜಿಲ್ಲೆಯ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಒಬ್ಬರೇ ಎರಡು ಕಡೆ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಒಂದು ಪಂಚಾಯಿತಿಗೆ ಒಬ್ಬರಂತೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಬೇಕು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ನಿಯೋಜಿಸಬೇಕು” ಎಂದು ಒತ್ತಾಯಿಸಿದರು.

“ವಿಜಯಪುರ ಜಿಲ್ಲೆಯಲ್ಲಿ 211 ಗ್ರಾಮ ಪಂಚಾಯಿತಿಗಳಿದ್ದು, ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಅಭಿವೃದ್ಧಿ ಅಧಿಕಾರಿಗಳು ಇದ್ದರೂ ಕೆಲವೊಂದು ಪಂಚಾಯಿತಿಗಳಿಗೆ ಒಬ್ಬರೇ ಎರಡು ಕಡೆ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಬಹಳ ಕಷ್ಟಸಾಧ್ಯ. ಆದಕಾರಣ ಎಲ್ಲ 211 ಪಂಚಾಯತಗಳಿಗೆ ಒಬ್ಬರಂತೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಬೇಕು. ಜತೆಗೆ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳ ಜೊತೆ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ನಿಯೋಗದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ ಪಾಟೀಲ, ಎಂ ಎಚ್ ಪಾಠಣ, ತಿಕೋಟಾ ತಾಲೂಕು ಅಧ್ಯಕ್ಷ ಸಿದ್ದಗೊಂಡ ರುದ್ರಗೌಡರ, ಇಂಡಿ ತಾಲೂಕ ರಮೇಶ ಮಂಗಳೂರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...