ವಿಜಯಪುರ | ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ಮನವಿ

Date:

ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ತರಗತಿಗಳನ್ನು ಬಹಿಷ್ಕರಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಡಬ್ಬಿ, ಕಾಲೇಜುಗಳ ಅತಿಥಿ ಉಪನ್ಯಾಸಕರಾಗಿ ಸುಮಾರು 10-15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸೇವಾ ಭದ್ರತೆ ಒದಗಿಸಬೇಕು. ಎಲ್ಲ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಒಳಗಾಗಿ ಈಡೇರಿಸದಿದ್ದರೆ, ಅಧಿವೇಶನದ ಸಂದರ್ಭದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಂಘದ ಗೌರವಾಧ್ಯಕ್ಷ ಡಾ. ಆನಂದ ಕುಲಕರ್ಣಿ, ಡಾ. ಎಸ್.ಐ. ಎಂಬತ್ತಾನಾಳ, ಆರ್.ಬಿ. ನಾಗರೆಡ್ಡಿ, ಎಸ್.ಡಿ. ಬಿರಾದಾರ್, ಮುಜಾವರ್, ಐ. ಆರ್. ಎರನಾಳ, ಎಸ್.ಎಸ್. ಅಂಗಡಿ, ಶಿವಕುಮಾರ್ ಬಿ.ಯು, ಅರ್ಜುನ್ ಲಂಬಾಟೆ, ಜಿ.ಕೆ. ಯೋಗೇಶ್, ಎಂ. ವೀರೇಶ್, ಡಾಕ್ಟರ್ ರಮೇಶ್ ತೇಲಿ, ಭೀಮರಾಯ  ಡವಳೇಶ್ವರ್, ಕೆ.ಎಂ. ರಾಠೋಡ್, ಎಸ್ ಎಂ ಸಿಂಹಸನಮಟ, ರೂಪ ಕಮದಾಳ, ದೀಪಾ ಶ್ರೀ ತೋರಟ, ಲೀಲಾ ವಿಟಿ, ಶಕೀರ ಕಿತ್ತೂರ, ರೇಣುಕಾ ಹೆಬ್ಬಾಳ್, ತೇಜಸ್ವಿನಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...