ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿತು.
ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಿಯೋಗವು, “ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜನ್ನು ಜಿಲ್ಲೆಯ ಜನತೆ ಒಪ್ಪುವುದಿಲ್ಲ. ಈಗಾಗಲೇ ವಿಜಯಪುರದಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳು ಇದ್ದು, ಅವುಗಳೂ ಕೂಡ ಪ್ರಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಬಳಸಿಕೊಂಡಿವೆ. ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೂ ಜಿಲ್ಲಾ ಆಸ್ಪತ್ರೆಯಲ್ಲಿವೆ. ಸರ್ಕಾರ ಕೂಡಲೇ ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿತು.
ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ 1 ಲಕ್ಷ ದಂಡ
ಬಿ. ಭಗವಾನ ರೆಡ್ಡಿ, ಅಣ್ಣಾರಾಯ ಈಳಗೇರ, ಸಂಗಮೇಶ ಸಗರ, ಲಲಿತಾ ರೆಡ್ಡಿ, ಅಕ್ರಮ್ ಮಾಶ್ಯಾಳಕರ, ಅರವಿಂದ ಕುಲಕರ್ಣಿ ನಿಯೋಗದಲ್ಲಿ ಇದ್ದರು.





