ವಿಜಯಪುರ | SBIಗೆ ನುಗ್ಗಿದ ಮುಸುಕುಧಾರಿಗಳು: 8 ಕೋಟಿ ನಗದು, 50 ಕೆ.ಜಿ. ಚಿನ್ನ ದೋಚಿ ಪರಾರಿ!

Date:

ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ. ಬ್ಯಾಂಕಿನ ದೈನಂದಿನ ವಹಿವಾಟು ಮುಗಿಸಿ, ಬಂದ್ ಮಾಡುವ ವೇಳೆ ನುಗ್ಗಿದ ಮುಸುಕುಧಾರಿಗಳ ತಂಡವು ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.

ದರೋಡೆಕೋರರು 8 ಕೋಟಿ ನಗದು, ಸುಮಾರು 50 ಕೆ.ಜಿಗೂ ಹೆಚ್ಚು ಚಿನ್ನವನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಿಸ್ತೂಲ್​, ಮಾರಕಾಸ್ತ್ರಗಳೊಂದಿಗೆ ಬಂದಿದ್ದ 5ಕ್ಕೂ ಹೆಚ್ಚು ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.

ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಪೊಲೀಸರು ಮಹಾರಾಷ್ಟ್ರವನ್ನು ಸಂಪರ್ಕಿಸುವ ರಸ್ತೆಗಳಿಗೆ ನಾಕಾ ಬಂಧಿ ಹಾಕಿದ್ದಾರೆ. ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಹಾಗೂ ಆಧಿಕಾರಿಗಳು ಆ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಪೊಲೀಸರು ಬ್ಯಾಂಕ್‌ನಲ್ಲಿದ್ದ ಸಿಸಿ ಕ್ಯಾಮರಾಗಳ ದೃಶ್ಯ ಪರಿಶೀಲಿಸಿದ್ದಾರೆ. 8 ಕೋಟಿ ನಗದು, ಸುಮಾರು 50 ಕೆ.ಜಿಗೂ ಹೆಚ್ಚು ಚಿನ್ನ ದರೋಡೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದಾಗಿ ಎಸ್​ಬಿಐ ಬ್ಯಾಂಕ್ ನಲ್ಲಿ ಚಿನ್ನಾಭರಣವನ್ನು ಇಟ್ಟ ಗ್ರಾಹಕರಲ್ಲಿ ಆತಂಕ ಮನೆಮಾಡಿದೆ.

ಹಣ ಮತ್ತು ಚಿನ್ನ ಕಳ್ಳತನವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಹಕರು ಮಂಗಳವಾರ ರಾತ್ರಿಯವರೆಗೂ ಎಸ್​ಬಿಐ ಬ್ಯಾಂಕ್ ಎದುರು ಜಮಾವಣೆಯಾಗಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಪರದಾಡಬೇಕಾಯಿತು. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

1002266349

ಐದಕ್ಕೂ ಅಧಿಕ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿದೆ. ಬ್ಯಾಂಕ್ ಆಧಿಕಾರಿಗಳು ನಿಖರವಾಗಿ ಮಾಹಿತಿ ನೀಡಿದ ಬಳಿಕವಷ್ಟೇ ದರೋಡೆಯಾದ ನಗದು ಹಾಗೂ ಚಿನ್ನಾಭರಣ ಮಾಹಿತಿ ಲಭ್ಯವಾಗಲಿದೆ. ಬ್ಯಾಂಕಿನಲ್ಲಿದ್ದ ಸಿಸಿ ಕ್ಯಾಮೆರಾ ಹಾರ್ಡ್ ಡಿಸ್ಕ್ ವಶಕ್ಕೆ ಪಡೆದ ಪೊಲೀಸರು ಸುತ್ತಮುತ್ತಲ ಸಿಸಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ಈ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳನ್ನು ಕರೆಸಲು ಸೂಚಿಸಲಾಗಿದೆ.

ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆಕೋರರು ಮಹಾರಾಷ್ಟ್ರದತ್ತ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಚಡಚಣ ಪಟ್ಟಣದಿಂದ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ಮಂಗಳವೇಡ ತಾಲೂಕಿನ ಹುಲಿಜಂತಿ ಗ್ರಾಮದ ಮಾರ್ಗವಾಗಿ ಹೋಗಿರುವ ದರೋಡೆಕೋರರ ಗುಂಪು ಚದುರಿಕೊಂಡು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹುಲಿಜಂತಿ ಗ್ರಾಮದ ಬಳಿ ದರೋಡೆಕೋರರು ಪ್ರಯಾಣ ಮಾಡುತ್ತಿದ್ದ ಕಾರು ಕುರಿಗಳಿಗೆ ಡಿಕ್ಕಿಯಾಗಿದೆ. ಕುರಿಗಳಿಗೆ ಡಿಕ್ಕಿಯಾದದ್ದನ್ನ ಪ್ರಶ್ನಿಸಿದ ಗ್ರಾಮಸ್ಥರಿಗೆ ಕಾರಿನಲ್ಲಿದ್ದ ಓರ್ವ ದರೋಡೆಕೋರ ಕೈಯಲ್ಲಿ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿ ಪರಾರಿಯಾಗಿರುವುದು ತಿಳಿದುಬಂದಿದೆ.

KA 24 DH 2456 ನಂಬರಿನ ಕಾರಿನಲ್ಲಿ ಬಂದಿದ್ದ ಓರ್ವ ದರೋಡೆಕೋರನ ಕಾರಿನಲ್ಲಿ ಅಲ್ಪಸ್ವಲ್ಪ ಚಿನ್ನಾಭರಣ ಬಿದ್ದಿತ್ತು. ಇನ್ನುಳಿದ ದರೋಡೆಕೋರರು ಪ್ರತ್ಯೇಕವಾಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯಾಂಕ್​​ನಲ್ಲಿ ದರೋಡೆ ನಡೆದ ಸ್ಥಳಕ್ಕೆ ‌ಶ್ವಾನದಳ ಬೆರಳಚ್ಚು‌ದಳ‌ ಸಿಬ್ಬಂದಿ ಆಗಮಿಸಿ ಪರೀಕ್ಷೆ ನಡೆಸಿದ್ದಾರೆ.

ಈ ಘಟನೆಯ ಕುರಿತು ಸಕಲ ಮಾಹಿತಿ ಕಲೆ ಹಾಕಲಾಗುತ್ತಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದೇವೆ. ತನಿಖೆ ಚುರುಕುಗೊಳಿಸಿದ್ದೇವೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ, ಸದ್ಯ ಎಷ್ಟು ಪ್ರಮಾಣದ ನಗದು ಚಿನ್ನ ಕಳ್ಳತನವಾಗಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಈಗಾಗಲೇ ಈ ಪ್ರಕರಣದಲ್ಲಿ ಹಳೆಯ ಬ್ಯಾಂಕ್ ಉದ್ಯೋಗಿ ಸಹಿತ ಹಲವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಕೆನರಾ ಬ್ಯಾಂಕ್ ಪ್ರಕರಣ ಮಾಸುವ ಮುನ್ನವೇ ವಿಜಯಪುರದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದರೋಡೆ ನಡೆದು ಹೋಗಿದೆ. ಸಾರ್ವಜನಿಕರು ಸೇರಿದಂತೆ ಬ್ಯಾಂಕಿನ ಗ್ರಾಹಕರು ಆತಂಕಿತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...