ವಿಜಯಪುರ | ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶೈಕ್ಷಣಿಕ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ

Date:

ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ. ಮುಂದೆ ನೀವು ನಿಮ್ಮಂತೆ ಇರುವ ವಿಧ್ಯಾರ್ಥಿಗಳಿಗೆ ಸಹಕಾರ ನೀಡಿ ಅವರಿಗೆ ನೀವು ಸಹಾಯ ಮಾಡಿ ಎಂದು ಬಿಜಾಪುರ ಜೆಸ್ಟಿಟ್ ಸಂಸ್ಥೆಯ ಫಾದರ್ ಫ್ರಾನ್ಸಿಸ್ ಕರೆ ನೀಡಿದರು.

ವಿಜಯಪುರ ನಗರದ ಗಾಂಧಿ ಚೌಕ್ ಹತ್ತಿರವಿರುವ ಸಂತ ಅನ್ನಮ್ಮರ ದೇವಾಲಯದ ಸಭಾಂಗಣದಲ್ಲಿ ಜೆಸ್ವಿಟ್ ಎಜುಕೇಶನಲ್ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂಸ್ಥೆಯ ವಿವಿಧ ಯೋಜನೆಗಳ ಅಡಿ ಹಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಶೈಕ್ಷಣಿಕ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಥಿತಿಗಳಾಗಿದ್ದ, ಲೋಯೋಲಾ ಐಟಿಐ ಕಾಲೇಜು ಮುಖ್ಯಸ್ಥ ಫಾದರ್ ಅಂತೋನಿ ಲಾರೆನ್ ಮಾತನಾಡಿ, “ಸಮಾಜದಲ್ಲಿ ಹಾಗೂ ಜೀವನದಲ್ಲಿ ಮುಂದೆ ಬರಲು ಒಂದು ದಿಟ್ಟಗುರಿ ಇರಬೇಕು ಹಾಗೂ ಆ ಗುರಿ ತಲುಪಲು ಒಬ್ಬ ಗುರು ಇರಬೇಕು. ಹಾಗೆ ನಿಮ್ಮ ಗುರಿ ತಲುಪಲು ಸಂಸ್ಥೆಯು ಶ್ರಮಿಸುತ್ತಿದೆ. ಎಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಆದರೆ, ನಿಮಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ, ನಾಯಕರಾಗಿ” ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ನಿರ್ದೇಶಕ‌ ಲಾರೆನ್ಸ್‌ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೊ ಮಾತನಾಡಿ, “ಆದ್ಯತೆ ಗುಂಪುಗಳಾದ ಮಾಜಿ ದೇವದಾಸಿ ತಾಯಂದಿರ ಸಮುದಾಯದ ಮಕ್ಕಳು, ಎಚ್‌ಐವಿ ಬಾಧಿತ ಹಾಗೂ ಸೋಂಕಿತ ಮಕ್ಕಳು ಹಾಗೂ ಏಕಪಾಲಕರ ಮಕ್ಕಳು, ವಿಶೇಷ ಅಗತ್ಯವಿರುವ ಮಕ್ಕಳು, ಯಾವುದೇ ಕಾರಣದಿಂದ ಶಿಕ್ಷಣದಿಂದ ವಂಚಿತರಾಗದೆ ಉತ್ತಮ ಶಿಕ್ಷಣ ಪಡೆದುಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಇದರಿಂದ ತಮ್ಮ ಕುಟುಂಬ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವ ಘನತೆಯಿಂದ ಬದುಕುವಂತಾಗುತ್ತದೆ” ಎಂದು ಹೇಳಿದರು.

ಎಲ್ಲ 89 ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...