ವಿಜಯಪುರ | ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಕುರಿತ ವಿಚಾರ ಸಂಕಿರಣ

Date:

ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.

ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಶನ್ ವಿಜಯಪುರ ಘಟಕ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ’ ಕುರಿತ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ಯುಗದಲ್ಲಿ ವಿಜ್ಞಾನ ಸಂವಹನ ಅತ್ಯವಶ್ಯಕವಾದ ವಿಷಯವಾಗಿದೆ. ಇದನ್ನು ನಮ್ಮ ಮಕ್ಕಳಿಗೆ ಅರ್ಥೈಸಬೇಕಾದ ಅವಶ್ಯಕತೆ ಇದೆ. ವೈಜ್ಞಾನಿಕ ವಿಷಯದ ಬಗ್ಗೆ ಸರಿಯಾಗಿ ಗ್ರಹಿಸಿ ಅದನ್ನು ತಿಳಿದುಕೊಳ್ಳಬೇಕಾದದ್ದು ಪ್ರತಿಯೊಬ್ಬರ ಜವಾಬ್ದಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈಜ್ಞಾನಿಕ ಕ್ಷೇತ್ರದಲ್ಲಿ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕೆಂದರೆ ಇಂಗ್ಲೀಷ್ ಭಾಷಾ ಕೌಶಲ ಬಹಳ ಅತ್ಯವಶ್ಯಕ. ಏಕೆಂದರೆ ಮಾತೃ ಭಾಷೆಯಲ್ಲಿ ಅನೇಕ ಸಂಶೋಧನೆಗಳು ನಡೆದರೂ ಅವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಭಾಷೆಯ ಬಳಕೆ ಪ್ರಮುಖವಾಗಿದೆ. ನಮ್ಮ ಮಾತೃ ಭಾಷೆಯಲ್ಲಿ ವಿಜ್ಞಾನವನ್ನು ಗ್ರಹಿಸಬಹುದು. ಆದರೆ ಅದನ್ನು ಜಗತ್ತಿಗೆ ಪರಿಚಯಿಸಬೇಕೆಂದರೆ ನಮಗೆ ಇಂಗ್ಲಿಷ್ ಭಾಷೆ ಅನಿವಾರ್ಯ” ಎಂದರು.

“ಸಮೂಹ ಮಾಧ್ಯಮಗಳಲ್ಲಿ ವಿಜ್ಞಾನದ ಕುರಿತು ಸುದ್ದಿ ಮಾಡುವುದು ಸುಲಭದ ಮಾತಲ್ಲ. ವರದಿ ಮಾಡುವವರು ಬಹಳ ಜಾಗೂರಕತೆಯಿಂದ ಎಲ್ಲ ವಿಷಯವನ್ನೂ ಆರಿತುಕೊಂಡು ವರದಿ ಮಾಡಬೇಕಾಗುತ್ತದೆ. ವಿಜ್ಞಾನದ ಕುರಿತು ಪ್ರಾದೇಶಿಕ ಭಾಷೆಗಳಲ್ಲಿ ತಿಳಿಸುವುದು ಒಂದು ಸವಾಲಿನ ವಿಷಯ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ ಓಂಕಾರ ಕಾಕಡೆ ಮಾತನಾಡಿ, “ಪ್ರಸ್ತುತ ದಿನಮಾನದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ವಿಜ್ಞಾನ ಬರವಣಿಗೆ ಮಾಡುವವರು ಬೆರಳೆಣಿಕೆಯಷ್ಟು ಜನರಿದ್ದಾರೆ. ವಿಜ್ಞಾನ ಪದವೀಧರರು ಬರವಣಿಗೆಯ ಕೌಶಲಗಳನ್ನು ಕರಗತ ಮಾಡಿಕೊಳ್ಳುವ ಮೂಲಕ ವಿಜ್ಞಾನ ಬರವಣಿಗೆ ಮಾಡಲು ಸಾಕಷ್ಟು ಅವಕಾಶಗಳಿವೆ. ಈ ಅವಕಾಶಗಳನ್ನು ವಿದ್ಯಾರ್ಥಿನಿಯರು ಬಳಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲೀಷ್‌ನಲ್ಲಿ ಪರಿನೀತಿಯನ್ನು ಹೊಂದಿದ್ದರೆ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ. ವಿಜ್ಞಾನ ಮೆದುಳಿಗೆ ಸಂಬಂಧಪಟ್ಟ ವಿಷಯವಾದರೆ ಬರವಣಿಗೆ ಹೃದಯಕ್ಕೆ ಸಂಬಂಧಿಸಿದೆ. ಈ ಎರಡನ್ನೂ ಬೆರೆಸುವುದೇ ವಿಜ್ಞಾನ ಪತ್ರಿಕೋದ್ಯಮ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರ ನೇಮಕ

ವಿಚಾರ ಸಂಕೀರ್ಣದ ತಾಂತ್ರಿಕಗೋಷ್ಟಿಗಳಲ್ಲಿ ವಿಜ್ಞಾನ ಬರಹಗಾರ ಶ್ರೀರಾಮ್ ಭಟ್ ಹಾಗೂ ಹುನಗುಂದದ ವಿಜ್ಞಾನ ಶಿಕ್ಷಕ ರಮೇಶ್ ವೀರಪ್ಪ ಬಳ್ಳ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ನಾಟಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...