ವಿಜಯಪುರ | ಸಂವಿಧಾನ ವಿರೋಧಿ, ದ್ವೇಷ ಭಾಷಣ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಹಲವು ಸಂಘಟನೆಗಳ ಆಗ್ರಹ

Date:

ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತ, ದ್ವೇಷ ಭಾಷಣ ಮಾಡುತ್ತ ಸಮಾಜದ ಸ್ವಾಸ್ಥ್ಯ ಹಾಳುಗೆಡುವುತ್ತಿರುವಂತಹ ಮನಸುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತರಪರ, ಪ್ರಗತಿಪರ, ಬಸವಪರ, ಸಂವಿಧಾನಪರ ಸಂಘಟನೆಗಳು ಹಾಗೂ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.

“ಬೆಂಗಳೂರಿನಲ್ಲಿ ನವೆಂಬರ್‌ 23ರಂದು ನಡೆದ ವಿಶ್ವ ಹಿಂದೂ ಪರಿಷತ್ತಿನ ಸಂತರ ಸಭೆಯಲ್ಲಿ ವಿಶ್ವ ಒಕ್ಕಲಿಗರ ಪೀಠದ ಚಂದ್ರಶೇಖರನಾಥ ಸ್ವಾಮಿ, ʼದೇಶದಲ್ಲಿರುವ ಮುಸ್ಲಿಮರ ಮತದಾನದ ಹಕ್ಕನ್ನು ಕಿತ್ತುಕೊಳ್ಳಬೇಕುʼ ಅಂತ ಹೇಳುತ್ತಾರೆ. ಅದರಂತೆ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಕೂಡಾ, ʼಮುಸ್ಲಿಮರು ಭಾರತ ದೇಶದ ಅವಿಭಾಜ್ಯ ಅಂಗವಾಗಿದ್ದಾರೆʼ ಅನ್ನುವ ಮೂಲಕ ಸೌಹಾರ್ದತೆ ಕೆಡಿಸುವ ಮಾತನಾಡಿದ್ದಾರೆ. ಭಾರತದ ಮೂಲ ನಿವಾಸಿಗಳಾದ ಮುಸ್ಲಿಮರು ಸ್ವಾತಂತ್ರ್ಯ ಹೋರಾಟ ಕಾಲದಿಂದ ಇಂದಿನವರೆಗೆ ದೇಶದ ಅಭಿವೃದ್ಧಿಯ ಸಲುವಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆಂಬುದು ಸ್ವಾಮೀಜಿಯವರ ಪ್ರಶ್ನೆಗೆ ಬಂದಿಲ್ಲವೆಂದ ಮೇಲೆ ಅವರು ಯಾವ ಲೋಕದಲ್ಲಿ ಬಾಳುತ್ತಿದ್ದಾರೆ” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

“ಇದೇ ಸಂತ ಸಮಾವೇಶದಲ್ಲಿ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿ, ʼನಮಗೆ ಗೌರವ ಕೊಡುವ ಸಂವಿಧಾನ ಬೇಕು. ಈ ಸಂವಿಧಾನ ಹಿಂದೂಗಳ ಪರವಾಗಿಲ್ಲʼ ಎನ್ನುವ ಸಂವಿಧಾನ ವಿರೋಧಿ ಹಾಗೂ ಉದ್ದಟತನದ ಹೇಳಿಕೆ ನೀಡಿದ್ದಾರೆ. ವಕ್ಫ್‌ ಹೋರಾಟದ ನೆಪದಲ್ಲಿ ಬೀದರ್‌ನಲ್ಲಿ ನಡೆದ ಸಭೆಯೊಂದರಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್‌, ʼಬಸವಣ್ಣನವರು ಹೊಳೆಗೆ ಹಾರಿ ಸತ್ತಂಗೆ ಸಾಯಬೇಕಾಗುತ್ತದೆʼ ಎಂಬ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಬಸವಾನುಯಾಯಿಗಳ ಮನಸ್ಸನ್ನು ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವು ಧರ್ಮಗಳು, ಹಲವು ಭಾಷೆಗಳು, ಸಾವಿರಾರು ಜಾತಿಗಳು ಮತ್ತು ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶವನ್ನು ಒಂದಾಗಿ ಬೆಸೆಯುವ ದಿಸೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ವಿಶಿಷ್ಟವಾದ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನದ ಕಾರಣದಿಂದಾಗಿಯೇ ಎಲ್ಲರಿಗೂ ಸಮಾನ ಹಕ್ಕುಗಳು ದೊರೆತಿವೆ. ಜಗತ್ತಿನಲ್ಲೇ ಶ್ರೇಷ್ಠವೆನಿಸಿಕೊಂಡ ಭಾರತದ ಸಂವಿಧಾನದ ಮೇಲೆ ಮನುವಾದಿಗಳು ನಿರಂತರವಾಗಿ ಆಕ್ರಮಣ ನಡೆಸಿದ್ದಾರೆ. ಈ ಆಕ್ರಮಣದ ಭಾಗವಾಗಿಯೇ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮಿ, ಒಕ್ಕಲಿಗರ ಪೀಠದ ಚಂದ್ರಶೇಖರ ಸ್ವಾಮಿ ಮತ್ತು ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳು ಸಂವಿಧಾನ ವಿರೋಧಿ ಹಾಗೂ ದೇಶದ್ರೋಹಿ ಹೇಳಿಕೆ ನೀಡಿರುವುದು ಖಂಡನೀಯ” ಎಂದರು.

“‌ಕರ್ನಾಟದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ಸರ್ಕಾರವೇ ಘೋಷಿಸಿರುವ ವಿಶ್ವಗುರು ಬಸವಣ್ಣನವರ ಕುರಿತಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿರುವು‌ದೂ ಕೂಡಾ ಖಂಡನೀಯ. ಸಂವಿಧಾನವಿರೋಧಿ ಶಕ್ತಿಗಳು ಮತ್ತು ಬಸವವಿರೋಧಿ ಮನಸ್ಥಿತಿಯ ಈ ವ್ಯಕ್ತಿಗಳನ್ನು ಅದೇ ಮನಸ್ಥಿತಿಯ ಹಲವು ಸ್ವಾಮಿಗಳು ಮತ್ತು ರಾಜಕೀಯ ಮುಖಂಡರು ಬೆಂಬಲಿರುವುದೂ ಕೂಡ ಖಂಡನಾರ್ಹವಾಗಿದೆ. ಇಂಥಹ ಸಂವಿಧಾನ ಮತ್ತು ಸಮಾನತೆ ವಿರೋಧಿ ವ್ಯಕ್ತಿಗಳ ವಿರುದ್ಧ ಕರ್ನಾಟಕ ಸರ್ಕಾರವು ಸ್ವಯಂ‌ ಪ್ರೇರಣೆಯಿಂದ ದೇಶದ್ರೋಹಿ ಎಂದು ಪ್ರಕರಣ ದಾಖಲಿಸಬೇಕಿತ್ತು. ಆದರೆ ಸರಕಾರವೂ ಮೌನವಾಗಿರುವುದು, ವಿರೋಧ ಮನಸುಗಳ ಪರವಾಗಿದೆಯೆಂಬ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದೆ” ಎಂದು ಸರ್ಕಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ : ಮುಖ್ಯಮಂತ್ರಿ ಸಿದ್ದರಾಮಯ್ಯ

“ಕಾರಣ ಸರ್ಕಾರವು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ, ಚಂದ್ರಶೇಖರನಾಥ ಸ್ವಾಮಿ, ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಹಾಗೂ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳ ವಿರುದ್ಧ ಕೇಸು ದಾಖಲಿಸಿ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧವೇ ‌ತೀವ್ರವಾದ ಹೋರಾಟ ಮಾಡಬೇಕಾಗುತ್ತದೆ” ಎಂದು ಪ್ರತಿಭಟನಾಕರಾರು ಸರ್ಕಾರವನ್ನು ಎಚ್ಚರಿಸಿದರು.

ಮನಗೂಳಿ ವಿರಕ್ತಮಠದ ವೀರತೀಶಾನಂದ ಸ್ವಾಮೀಜಿ, ಬಸವಕಲ್ಯಾಣ ಬೇಲೂರು ಮಠದ ಸಂಗನ ಬಸವ ಸ್ವಾಮೀಜಿ, ಆರಾಮೇಲ ವಿರಕ್ತಮಠದ ಜಯದೇವ ಮಲ್ಲಿ ಬಮ್ಮ ಸ್ವಾಮೀಜಿ, ಮನಗೂಳಿ ರೇವಣಸಿದ್ದೇಶ್ವರ ಮಠದ ಸೇರ್ಪಯ್ಯ ಸ್ವಾಮೀಜಿ, ಪ್ರಗತಿಪರ ಮುಖಂಡರಾದ ಅನಿಲ ಹೊಸಮನಿ, ಜೆ.ಎಸ್.ಪಾಟೀಲ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ಬಿ.ಎಸ್.ಗಸ್ತಿ ರಾಜಶೇಖರ ಯಾರನಾಳ, ಚಂದ್ರಶೇಖರ ಘಂಟೆಪ್ಪಗೋಳ, ಡಾ.ರವಿ ಬಿರಾದಾರ, ರಮೇಶ ಕವಲಗಿ, ಸಂಜು ಕಾಂಬೊಗಿ, ಶಾಸ್ತ್ರಿ ಹೊಸಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...