ವಿಜಯಪುರ | ಕುರಿಗಾಹಿ ಹತ್ಯೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ

Date:

ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆ ಪ್ರಕರಣ ಸಂಬಂಧ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿತು.

‌ಆರೋಪಿಗಳಿಗೆ ಶಿಕ್ಷೆ ವಿಧಿಸುವುದರ ಜತೆಗೆ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ಮಾಡಬೇಕು ಎಂದು ಸಂಘಟನೆಯ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಮುತ್ತು ಟಕ್ಕಳಕಿ ಅವರು ಶಿರಸ್ತೇದಾರ್ ಎಂ ಎ ಬಾಗೇವಾಡಿಯವರಿಗೆ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ರೈತ ಸಮುದಾಯ, ಶೋಷಿತ ಸಮುದಾಯ ಹಾಗೂ ಹಿಂದುಳಿದ ವರ್ಗದವರು ಕುರಿಗಾರಿಕೆ ಮತ್ತು ಪಶುಸಂಗೋಪನೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವುದು ಸಾಂಪ್ರದಾಯಿಕ ಕಸುಬಾಗಿರುತ್ತದೆ. ಬೆಟ್ಟ ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯವಾಗಿ ಹಾಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಬಡವರ ಪಾಲಿಗೆ ಕುರಿಗಾರಿಕೆ ಹಾಗೂ ಪಶುಪಾಲನೆ ವರದಾನವಾಗಿರುತ್ತದೆ. ರಾಜ್ಯದಲ್ಲಿ ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಮಾ.9ರಂದು ಬಾಗಲಕೋಟೆಯ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪನನ್ನು ಕುರಿ ಕಳ್ಳತನ ಮಾಡುವ ಗುಂಪು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ 20 ಲಕ್ಷ ಆರ್ಥಿಕ ನೆರವು ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುತ್ತು ಹಾಲ್ಯಾಳ ಮಾತನಾಡಿ, “ಈ ಹಿಂದೆ 2022ರಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಲಕ್ಷ್ಮೀ ಕಳ್ಳಿಮನಿ ಎಂಬ ಕುರಿಗಾಹಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು, ಕುರಿ ಕಳ್ಳತನ ಮಾಡುವ ಉದ್ದೇಶದಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪ್ರಭು ಮೇತ್ರೆ ಅವರನ್ನು ಕೊಲೆ ಮಾಡಿರುವಂತ ನಿದರ್ಶನಗಳು ಮಾನವೀಯತೆಯನ್ನು ಪ್ರಶ್ನಿಸುತ್ತವೆ. ಗುಡ್ಡಗಾಡಿನಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆ ಅಧಿಕಾರಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಕ್ಕೆ ಒಳಗಾಗುತ್ತಿದ್ದು ಇಂತಹ ಅಸಂಖ್ಯಾತ ಪ್ರಕರಣಗಳು ಬೆಳಕಿಗೆ ಬಂದಿರುವುದಿಲ್ಲ. ಪ್ರಾಚೀನ ಹಾಗೂ ಸ್ವತಂತ್ರಪೂರ್ವ ಕಾಲದಿಂದಲೂ ಅರಣ್ಯ ಪ್ರದೇಶದಲ್ಲಿ, ಬೆಟ್ಟ ಗುಡ್ಡಗಳಲ್ಲಿ ಕುರಿಗಾರಿಕೆಯನ್ನು ಮಾಡಿಕೊಂಡು ಬಂದಿರುವ ಜನರಿಗೆ ಇಂದು ಆಯಾ ಪ್ರದೇಶದಲ್ಲಿ ಬದುಕುವ ಹಕ್ಕಿನ ಜೊತೆಗೆ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಪರ ಮುಖ್ಯಮಂತ್ರಿ ಎಂದು ಹೇಳುವ ಸಿದ್ದರಾಮಯ್ಯ ನವರ ಸರಕಾರ ಕೋಮಾಸ್ಥಿಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಉಪಾಧ್ಯಕ್ಷ ಅನಿಲ ವಾಲಿಕಾರ, ಜುಮಣ್ಣ ಹೊಕ್ರಾಣಿ, ಕಾರ್ಯದರ್ಶಿ ಮಾಳಿಂಗರಾಯ ಯರಝರಿ, ಶಿವು ವನಕ್ಯಾಳ, ಮುತ್ತು ನಾಡಗೌಡ, ದೇವು ವಾಲಿಕಾರ, ಸಿದ್ರಾಯ ಬಿರಾದಾರ, ರವಿ ಮೇಟಿ, ಶಿವು ಕವಡಿಮಟ್ಟಿ, ಮಲ್ಲು ಹಿರೇಕುರುಬರ, ಹಣಮಂತ ಪೂಜಾರಿ, ನಿಂಗಪ್ಪ ಬಂಡೆಪ್ಪನಹಳ್ಳಿ, ದ್ಯಾಮಣ್ಣ ಹಿರೇಕುರುಬರ, ದ್ಯಾಮಣ್ಣ ಶಿವಪುರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...