ಮಹಾನಗರ ಪಾಲಿಕೆ ಸದಸ್ಯೆಯೊಬ್ಬರ ಪತಿ ಮೆಲೆ ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿ, ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಪಾಲಿಕೆಯ ಪಕ್ಷೇತರ ಸದಸ್ಯೆ ನಿಶಾತ್ ನದಾಫ್ ಅವರ ಪತಿ, ರೌಡಿಶೀಟರ್ ಹೈದರ್ ನದಾಫ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರದ ಚಾಂದಾಪುರ ಕಾಲೊನಿ ಬಳಿ ನದಾಫ್ ತೆರಳುತ್ತಿದ್ದಾಗ, ಅವರ ಕಾರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ, ನಾಲ್ಕು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟು ತಗುಲಿ, ಸ್ಥಳದಲ್ಲೇ ನದಾಫ್ ಮೃತಪಟ್ಟಿದ್ದಾರೆ.
ನದಾಫ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ದಾಳಿಗೆ ನಿಖರ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ.




