ವಿಜಯಪುರ | ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಮೌನ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಕೈಯಲ್ಲಿ ಕಪ್ಪು ಪಟ್ಟಿಗಳನ್ನು ಧರಿಸಿ ಶಾಂತಿಯುತ, ಮೌನ ಪ್ರತಿಭಟನೆ ನಡೆಸಿದರು.

ಜಮಾಅತೆ-ಇ-ಇಸ್ಲಾಮಿ ಹಿಂದ್ ಸಂಚಾಲಕ ನೂರೆ ನಬಿ ನದಾಫ್ ಮಾತನಾಡಿ, “ಸರ್ಕಾರವು ಈ ಸಂವಿಧಾನ ಬಾಹಿರ ವಕ್ಫ್ ತಿದ್ದುಪಡಿ ಮಸೂದೆ-2024ನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಈ ಮಸೂದೆಯು ಭಾರತದ ನಾಗರಿಕರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ. ದೇಶದ ನ್ಯಾಯವನ್ನು ಪ್ರೀತಿಸುವ ಜನರೂ ಕೂಡಾ ಈ ಮಸೂದೆಯನ್ನು ವಿರೋಧಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಮುಖಂಡ ಅಬ್ದುಲ್ ಮಾತನಾಡಿ, “ವಕ್ಫ್‌ ಆಸ್ತಿಯನ್ನು ಕಳೆಯುವುದಕ್ಕೆ ಮಸೂದೆ ತರುತ್ತಿದೆ. ಕೇವಲ ಈ ಮಸೂದೆ ವಕ್ಫ್‌ ಆಸ್ತಿಯನ್ನು ಕಳೆಯುವುದಕ್ಕಷ್ಟೇ ಅಲ್ಲದೇ ಇಡೀ ದೇಶದ ಮುಸಲ್ಮಾನರ ವಿರುದ್ಧವಾಗಿದೆ” ಎಂದು ಪ್ರತಿಪಾದಿಸಿದರು.

ವೈದ್ಯ ಡಾ. ಮುಲ್ಲಾ ಮಾತನಾಡಿ, “ವಕ್ಫ್‌ ಆಸ್ತಿ ಯಾರ ಸ್ವತ್ತೂ ಅಲ್ಲ. ಅಲ್ಲಾಹನ ಸ್ವತ್ತು. ಯಾವುದೇ ಕಾರಣಕ್ಕೂ ಯಾರೂ ಆಸ್ತಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರ ರಕ್ಷಣೆಗಾಗಿ ಮುಸ್ಲಿಮರು ಮುಂದೆ ಬರಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನ ಅಧ್ಯಕ್ಷರ ಸೂಚನೆಗಳನ್ನು ಪಾಲಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುವಂತೆ ಮುಸ್ಲಿಮರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮೌಲಾನಾ ಮಹಮ್ಮದ್ ರಫೀಕ್ ಮದನಿ ಖತೀಬ್, ಸಂದಲ್ ಮಸ್ಜಿದ್, ಪುರಸಭೆಯ ಸದಸ್ಯರಾದ ಅಬ್ದುಲ್ ಮಜಿದ್ ಮುಕಾಂದಾರ್, ಭಾಷಾ ನಾಯ್ಕೋಡಿ, ಬಾಬಾ ಮಕಾಂದರ್ ನಜೀರ್ ಮಕಾಂದಾರ್, ಸದ್ದಾಂ ನದಾಫ್ ಅತಾವುಲ್ಲಾ ಮಕಾಂದರ್, ಉಸುಮಾನ ಬಾಗವಾನ್ ಸೇರಿದಂತೆ ಹಲವಾರು ಯುವಕರು, ಗಣ್ಯರು, ಧಾರ್ಮಿಕ ಮುಖಂಡರು ಕಾನೂನು ವಿರುದ್ಧದ ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...