ವಿಜಯಪುರ | ಮೂಲಸೌಕರ್ಯಗಳಿಲ್ಲದೆ ಸೊರಗುತ್ತಿದೆ ಸೋಮನಾಳ; ಅಧಿಕಾರಿಗಳ ನಿರ್ಲಕ್ಷ್ಯ

Date:

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಸೋಮನಾಳ ಗ್ರಾಮದಲ್ಲಿ 13 ಮನೆಗಳ ಮುಂದೆ 200 ಮಿಟರ್ ರಸ್ತೆ ಉದ್ದಕ್ಕೂ ನೀರು ಸಂಗ್ರಹವಾಗುತ್ತದೆ. ರಸ್ತೆ ದುರಸ್ತಿ ಹಾಗೂ ಮೂಲಸೌಕರ್ಯಗಳಿಲ್ಲದೆ ಸ್ಥಳೀಯರು ನಲುಗುತ್ತಿದ್ದಾರೆ.

ರಸ್ತೆಯಲ್ಲಿ ಯಾವಾಗಲೂ ನೀರು ಸಂಗ್ರಹವಾಗುವುದರಿಂದ ಸಾರ್ವಜನಿಕರಿಗೆ ಓಡಾಡಲು ತುಂಬಾ ಸಮಸ್ಯೆ ಎದುರಾಗುತ್ತಿದೆ. ಅಲ್ಲದೆ ಚರಂಡಿ, ಶೌಚಾಲಯ ಸೇರಿದಂತೆ ಇತರೆ ಮೂಸೌಕರ್ಯಗಳಿಲ್ಲದೆ ಇಲ್ಲಿನ ಜನಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ಗಲ್ಲಿಗಳಲ್ಲಿನ ರಸ್ತೆಗಳು ಕೆಸರು ಗದ್ದೆಗಳಾಗಿದ್ದು, ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ವಾಹನ ಸವಾರರು, ವಯೋವೃದ್ದರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಗ್ರಾಮದಲ್ಲಿ ಪಂಚಾಯಿತಿ ಇದ್ದರೂ ಕೂಡ ಸಮಸ್ಯೆ ಬಗೆಹರಿಯದೇ ಇರುವುದು ಶೋಚನೀಯ. ಗಬ್ಬೆದ್ದು ನಾರುವ ಚರಂಡಿಗಳು, ರಸ್ತೆಗಳ ಅವ್ಯವಸ್ತೆ ಸೇರಿದಂತೆ ಸುಸಜ್ಜಿತ ನೀರಿನ ನಳಗಳಿಲ್ಲ. ಅಲ್ಲದೆ ಹಲವು ಕ್ರಿಮಿಕೀಟಗಳ ಕಾಟದಲ್ಲಿ ಜೀವನ ನಡೆಸುವ ದುಃಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೋಮನಾಳ ರಸ್ತೆ 1

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಚರಂಡಿ ಎತ್ತರದಲ್ಲಿರುವ ಕಾರಣ ನೀರು ಬೇರೆಡೆ ಪಾಸ್ ಆಗುವುದಕ್ಕೆ ಜಾಗವಿಲ್ಲದೆ ಮನೆಯ ಮುಂದೆ ನೀರು ನಿಲ್ಲುತ್ತದೆ. ಚರಂಡಿಯಲ್ಲಿ ಕಸ, ಪ್ಲಾಸ್ಟಿಕ್, ಕಟ್ಟಿಗೆ ಸೇರಿದಂತೆ ಅನೇಕ ಘನ ತ್ಯಾಜ್ಯ ತುಂಬಿ ಗಬ್ಬು ನಾರುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಡೆಂಘೀ, ಮಲೇರಿಯಾ, ಚಿಕನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡಿದ್ದು, ಆಸ್ಪತ್ರೆಗೂ ದಾಖಲಾಗಿದ್ದ ನಿದರ್ಶನಗಳಿವೆ” ಎಂದು ಅವಲತ್ತುಕೊಂಡರು.

ಸೋಮನಾಳ ರಸ್ತೆ 2

ಸ್ಥಳೀಯ ನಿವಾಸಿ ಸಂಗಪ್ಪ ಮಾತನಾಡಿ, “ಮುದ್ದೇಬಿಹಾಳದಿಂದ ಮುರಾಳ ಮಾರ್ಗವಾಗಿ ಅಡವಿಸೋಮನಾಳ, ಡೊಂಕುಮರಡಿ, ಮನ್ಯಾಳ, ಕುರೇಕನಾಳ, ಕೊಡೇಕಲ್‌ಗೆ ಮುಖ್ಯರಸ್ತೆಯಾಗಿರುವದರಿಂದ ನಿತ್ಯವೂ ನೂರಾರು ವಾಹನಗಳು ಓಡಾಡುತ್ತವೆ. ವಾಹನಗಳು ರಭಸವಾಗಿ ಬಂದರೆ ರಸ್ತೆಯಲ್ಲಿ ನಿಂತಿರುವ ನೀರು ಮನೆಯೊಳಗಿ ನುಗ್ಗಿ ತೊಂದರೆ ಅನುಭವಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೋಮನಾಳ 3

ರೈತ ಸಂಘಟನೆ ಮುಖಂಡ ಬಿ ಎಲ್ ಬಿರಾದಾರ ಮಾತನಾಡಿ, “ಈ ಸಮಸ್ಯೆಯಿಂದ ವಯೋವೃದ್ಧರು 4 ರಿಂದ 5 ಮಂದಿ ಕೈಕಾಲು ಮುರಿದುಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇದರ ವಿರುದ್ದ ಹೋರಾಟ ಮಾಡಿ ನಮ್ಮ ಹಕ್ಕನ್ನು ಪಡೆಯುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

ಗ್ರಾಮದ ಯುವಕ ಬಸವರಾಜ ಕೊಡೇಕಲ್ ಮಾತನಾಡಿ, “ಪಿಡಿಒ ವಿಜಯ್ ಮಹಾಂತೇತೇಶ್ ಅವರನ್ನು ಭೇಟಿಯಾಗಿ, ಸಮಸ್ಯೆಗಳನ್ನು ತಿಳಿಸಿದ್ದೆವು. ಒಂದೆರಡು ದಿನದಲ್ಲಿ ಸ್ವಚ್ಛ ಮಾಡಿಕೊಡುತ್ತೇವೆಂದು ಹೇಳಿದ್ದರು. ಮತ್ತೆ ಎರಡು ದಿನ ಬಿಟ್ಟು ಕೇಳಲು ಹೋದಾಗ ʼನಿಮ್ಮನಿಮ್ಮ ಮನೆ ಮುಂದೆ ನೀವೇ ಗರಸು ಹಾಕಿಕೊಳ್ಳಿ, ನಾವೇನು ಮಾಡೋಣʼವೆಂದು ಉಡಾಫೆ ಉತ್ತರ ನೀಡುತ್ತಾರೆ” ಎಂದು ಆರೋಪಿಸಿದರು.

ಸೋಮನಾಳ 2

ಸಮಸ್ಯೆಗಳಿಗೆ ಸಂಬಂಧಿಸಿದಂತೆ ಈ ದಿನ.ಕಾಮ್ ಪಿಡಿಒ ವಿಜಯ್‌ ಮಹಾಂತೇಶ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ಈ ಸಮಸ್ಯ ಪರಿಹರಿಸಲು ಶೀಘ್ರದಲ್ಲೇ ಕ್ರಮಕೈಗೊಳ್ಳಲಾಗುವುದು. ರಸ್ತೆ ಸುತ್ತುವರೆದಂತೆ ಅಧಿಕಾರಿಗೆ ಗಮನ ಹರಿಸಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...