ವಿಜಯಪುರ | ಕಸ ವಿಲೇವಾರಿ ಘಟಕ ಸ್ಥಳಾಂತರಗೊಳಿಸಲು ಆಗ್ರಹಿಸಿ ರೈತ ಸಂಘ ಮನವಿ

Date:

ಕಸ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂಬರ್ 258ರಲ್ಲಿ, 31 ಎಕರೆ 32 ಗುಂಟೆ ಗಾಯರಾಣ ಜಾಗವಿದೆ. ಈ ಸ್ಥಳದಲ್ಲಿ ಕಸವನ್ನು ತಂದು ಹಾಕುತ್ತಾರೆ. ಇದರಿಂದ ಗ್ರಾಮದಲ್ಲಿ 4500 ಮನೆಗಳಿವೆ. ವಾಸಿಸುತ್ತಿರುವ ಜನರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಆದ್ದರಿಂದ, ಕಸ ವಿಲೇವಾರಿ ಘಟಕದ ಸ್ಥಳವನ್ನು ಬೇರೆ ಕಡೆ ವರ್ಗಾವಣೆ ಮಾಡಿ, ವಾಸಿಸುತ್ತಿರುವ ಜನರಿಗೆ ಹಾಗೂ ಸಾರ್ವಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘಟನೆ ಒಕ್ಕೂಟದಿಂದ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈಗ ಇರುವ ಕಸ ವಿಲೇವಾರಿ ಘಟಕದ ಸ್ಥಳದಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಆಟದ ಮೈದಾನ, ಗಾರ್ಡನ್, ಅಥವಾ ಸರ್ಕಾರಿ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ ವಿಲೇವಾರಿ ಘಟಕದ ಸ್ಥಳವನ್ನು ಬೇರೆ ಕಡೆ ವರ್ಗಾವಣೆ ಮಾಡಿ ಕೊಡಬೇಕು ಎಂದು ಗ್ರಾಮಸ್ಥರು ಹಾಗೂ ರೈತ ಮುಖಂಡರು , ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಉಪ ತಹಶೀಲ್ದಾ‌ರ್ ಎಂ.ಕೆ.ನದಾಫ ಅವರಿಗೆ ರೋಣಿಹಾಳ ಗ್ರಾಮಸ್ಥರು ಹಾಗೂ ರೈತ ಸಂಘದ ಅಧ್ಯಕ್ಷ ಸೋಮು ಬಿರಾದಾರ ಮನವಿ ಸಲ್ಲಿಸಿದರು. ಈ ವೇಳೆ ಉಮೇಶ ಹೊಸಮನಿ, ಅಶೋಕ ಜಮಖಂಡಿ, ಬಸವರಾಜ ನ್ಯಾಮ ಗೊಂಡ, ಶರಣು ಸಾಹುಕಾರ ನ್ಯಾಮ ಗೊಂಡ, ಜಿ ಆರ್‌ನ್ಯಾಮಗೊಂಡ, ನೀಲನ ಗೌಡ ಬಿರಾದಾರ, ಮಲ್ಲುದೇಸಾಯಿ, ಬಸವರಾಜ ಬೀಳಗಿ, ವಿನೋದರೂ- ಡಗಿ, ವಿನೋದ ದೇಸಾಯಿ, ಬಸವ ರಾಜ ದೇಸಾಯಿ, ಹನುಮಂತ ನ್ಯಾಮ ಗೊಂಡ, ಶ್ರೀಕಾಂತ ಚಲವಾದಿ ಹಾಗೂ ರೈತರು ಉಪಸ್ಥತಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...