ವಿಜಯಪುರ | ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಅನ್ಯಾಯ: ಕೆಆರ್‌ಎಸ್ ಪಕ್ಷ

Date:

ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ 200 ಮೌಲಾನಾ ಆಜಾದ್ ಮಾದರಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷತನ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿ ನಮ್ಮ ಮತಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಕೆಆರ್‌ಎಸ್ ಪಕ್ಷ ಆರೋಪಿಸಿದೆ.

ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರು ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರುಗಳು ತಾಲೂಕಿಗೆ ಬಂದಿರುವ ಮೌಲಾನ ಆಜಾರ್ ಮಾದರಿ ಶಾಲೆಯನ್ನು ಬೇರೆ ಕಡೆಗೆ ಮಂಜೂರಾತಿಯನ್ನು ಪಡೆದಿರುವುದನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಮತಕ್ಷೇತ್ರದಲ್ಲಿ 40 ಸಾವಿರಕ್ಕಿಂತಲೂ ಹೆಚ್ಚು ಅಲ್ಪಸಂಖ್ಯಾತ ಮತದಾರರಿದ್ದಾರೆ. ಅದರಲ್ಲೂ ತುಂಬಾ ಬಡತನದ ಜೀವನ ಸಾಗಿಸುವ ಕುಟುಂಬಗಳ ಸಂಖ್ಯೆ ಹೆಚ್ಚಾಗಿದ್ದು, ಅವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಲವಾರು ದಶಕಗಳಿಂದ ವಂಚಿತರಾಗಿದ್ದಾರೆ. ಅಂತ ಕುಟುಂಬಗಳ ಮಕ್ಕಳು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದು ನಾಡಿನ ಮತ್ತು ದೇಶದ ಸಂಪನ್ಮೂಲ ನಾಗರಿಕರಾಗುವುದನ್ನು ತಪ್ಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಿವಮೊಗ್ಗ | ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಠಾಣೆ ಆರಂಭಿಸಲು ಆಗ್ರಹ

ಈ ಕೂಡಲೇ ರಾಜ್ಯ ಸರ್ಕಾರ ಶಾಲೆಯನ್ನು ಮಂಜೂರು ಮಾಡುವುದರ ಮೂಲಕ ನಮ್ಮ ಭಾಗದ ಬಡ ಮಕ್ಕಳ ಅನುಕೂಲ ಮಾಡಿಕೊಡಬೇಕಾಗಿ ಕೆ ಆರ್ ಎಸ್ ಪಕ್ಷವು ಅಗ್ರಹಿಸುತ್ತದೆ. ಒಂದು ವೇಳೆ ಮಂಜೂರಾತಿ ಮಾಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧರಣಿ, ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಲ್ಲದೇ, ಈ ಸಂಬಂಧ ಮನವಿಪತ್ರವನ್ನು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಹಮೀದ್ ಅಬ್ದುಲ್ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಇತರರು ಈ ವೇಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...