ವಿಜಯಪುರ | ಶಿಕ್ಷಕರು ವಿದ್ಯಾರ್ಥಿಗಳಿಗೆ ಜೀವನ ಪಾಠಗಳನ್ನೂ ಕಲಿಸಬೇಕು: ಪ್ರೊ.‌ಬಿ ಕೆ ತುಳಸಿಮಾಲ

Date:

ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿಪಡಿಸುವುದರ ಜೊತೆಗೆ ಶಿಕ್ಷಕರು ಅಭಿವೃದ್ಧಿಯಾಗಬೇಕು. ಶಿಕ್ಷಕರು ವೃತ್ತಿಪರತೆಯನ್ನು ಹೆಚ್ಚಿಸಲು ಹಲವಾರು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವಷ್ಟೇ ಅಲ್ಲ, ಜೀವನ ಪಾಠಗಳನ್ನೂ ಕಲಿಸಬೇಕು. ಶಿಕ್ಷಕರು ಪ್ರತಿ ವಿದ್ಯಾರ್ಥಿಗಳ ಬದುಕಿಗೆ ಪ್ರೇರಣೆಯಾಗಬೇಕು. ಹೊಸ ದೃಷ್ಟಿಕೋನ, ಹೊಸ ಭರವಸೆಯಿಂದ ಮುಂದಕ್ಕೆ ಸಾಗೋಣ ಎಂದು ಕರೆಕೊಟ್ಟರು.

ಇವತ್ತಿನ ತಂತ್ರಜ್ಞಾನ ಯುಗದಲ್ಲಿ, ಶಿಕ್ಷಕರು ಮುಂಬರುವ ಸವಾಲುಗಳನ್ನು ಎದುರಿಸಿ ಹೊಸ-ಹೊಸ ಬಗೆಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಮಾರ್ಗದರ್ಶನ ನೀಡಲು ಸಿದ್ಧರಾಗಿರಬೇಕು. ಜ್ಞಾನ ಕೊಟ್ಟ ಶಿಕ್ಷಕರನ್ನು ನೆನೆಸುತ್ತಾ, ನಾವು ಹೇಗೆ ಜ್ಞಾನ ಪಡೆಯಬೇಕು ಎಂಬುದನ್ನು ವಿದ್ಯಾರ್ಥಿಗಳು ಯೋಚಿಸಬೇಕು ಎಂದು ಬಿಎಲ್‌ಡಿಇಯ ಸಹ ಕುಲಪತಿ ಪ್ರೊ. ಅರುಣ ಸಿ ಇನಾಮದಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20240907 WA0004 edited

ಶಿಕ್ಷಕರ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಯಾಗಿದ್ದು, ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮಹತ್ವದ ಪಾತ್ರವನ್ನು ವಹಿಸುತ್ತಾರೆ. ಮನುಷ್ಯತ್ವ ಮತ್ತು ಸಂಸ್ಕಾರ ಕಲಿಸುವವರು ಶಿಕ್ಷಕರು ಮಾತ್ರ ಸಮಾಜವನ್ನು ಎತ್ತರಕ್ಕೆ ಒಯ್ಯಲು ಗುರಿ ಮತ್ತು ಗುರು ಅವಶ್ಯಕ. ಕೇವಲ ಶಿಕ್ಷಕರ ದಿನಾಚರಣೆ ದಿನವೇ ಗುರುಗಳಿಗೆ ಗೌರವಿಸುವುದು ಅಲ್ಲ, ಪ್ರತಿ ದಿನವೂ ಶಿಕ್ಷಕರಿಗೆ ಗೌರವಕೊಡಬೇಕು ಎಂದು ಮುಖ್ಯ ಅತಿಥಿ ಕುಲ ಸಚಿವ ಶಂಕರಗೌಡ ಸೋಮನಾಳ ಹೇಳಿದರು.

ಪ್ರಾಧ್ಯಾಪಕ ಪ್ರೊ.ಓಂಕಾರ ಕಾಕಡೆ, ಪ್ರೊ.ಶಾಂತಾದೇವಿ ಟಿ, ಪ್ರೊ.ಲಕ್ಷ್ಮಿದೇವಿ,ವಿವಿಧ ವಿಭಾಗಗಳ ಮುಖ್ಯಸ್ಥರು, ಆಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿನಿಯರು, ಕಾರ್ಯಕ್ರಮದ ಸಂಯೋಜಕ ಡಾ.ಚಂದ್ರಶೇಖರ ಮಠಪತಿ, ಡಾ.ಗಣೇಶ.ಎಸ್.ಆರ್, ಡಾ.ಬಾಬು ಲಂಬಾಣಿ ‌ಭಾಗವಹಿಸಿದ್ದರು. ವಿದ್ಯಾರ್ಥಿನಿ ನಿಕಿತಾ ಚಿತವಾಡಗಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...