ವಿಜಯಪುರ | ಪೊಲೀಸರ ಯಶಸ್ವಿ ಕಾರ್ಯಾಚರಣೆ; 10 ಕಂಟ್ರಿ ಪಿಸ್ತೂಲ್​, 24 ಸಜೀವ ಗುಂಡುಗಳು ವಶಕ್ಕೆ

Date:

ಅಕ್ರಮವಾಗಿ ಪಿಸ್ತೂಲ್​ಗಳನ್ನು ಹೊಂದಿದ್ದವರ ಮೇಲೆ ದಾಳಿ ಮಾಡಿದ ಪೊಲೀಸರು ಒಟ್ಟು 10 ಕಂಟ್ರಿ ಪಿಸ್ತೂಲ್​ಗಳು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದು, ಪಿಸ್ತೂಲ್​ ಹೊಂದಿದ್ದ 10 ಮಂದಿಯನ್ನೂ ಬಂಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್​ ನಿಂಬರಗಿ ತಿಳಿಸಿದ್ದಾರೆ.

ಇತ್ತೀಚೆಗೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಅರಕೇರಿಯಲ್ಲಿ ನಡೆದಿದ್ದ ಸತೀಶ ಪ್ರೇಮಸಿಂಗ ರಾಠೋಡ ಕೊಲೆ ಪ್ರಕರಣದ ತನಿಖೆಯಲ್ಲಿ ಪಿಸ್ತೂಲ್​ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಯಲಾಗಿತ್ತು. ಕೊಲೆ ಪ್ರಕರಣದ ಪ್ರಮುಖ ಆರೋಪಿ ರಮೇಶ್​ ಗೇಮು ಲಮಾಣಿಗೆ ಇನ್ನೋರ್ವ ಆರೋಪಿ ಸುರೇಶ್​ ರಾಠೋಡ ಎನ್ನುವಾತ ಪಿಸ್ತೂಲ್​ ಒದಗಿಸಿದ್ದನು. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವಿಜಯಪುರ ಜಿಲ್ಲೆಯ ಹಲವಾರು ಜನರಿಗೆ ಅಕ್ರಮ ಪಿಸ್ತೂಲ್​ ಪೂರೈಸಿರುವುದಾಗಿ ಒಪ್ಪಿಕೊಂಡಿದ್ದ. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ, ವಿವಿಧ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಳಕೆಯಲ್ಲಿದ್ದ ಪಿಸ್ತೂಲ್​ಗಳನ್ನು ವಶಪಡಿಸಿಕೊಂಡಿದೆ. ದಾಳಿ ವೇಳೆ 10 ಮಂದಿಯನ್ನೂ ಬಂಧಿಸಿದೆ.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ವಿರುದ್ಧದ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕಾಶ್​ ಮರ್ಕಿ ರಾಠೋಡ್,​ ಅಶೋಕ್​ ಪರಮು ಪಾಂಡ್ರೆ, ಸುಜಿತ್​ ಸುಭಾಸ್​ ರಾಠೋಡ್​, ಜನಾರ್ದನ ವಸಂತ ಪವಾರ, ಸಾಗರ್​ ಅಲಿಯಾಸ್​ ಸುರೇಶ್​ ರಾಠೋಡ್, ಸುಖದೇವ್​ ಅಲಿಯಾಸ್​ ಸುಖಿ ನರಸು ರಾಠೋಡ್, ​ಪ್ರಕಾಶ್​ ಭೀಮಸಿಂಗ್ ರಾಠೋಡ್, ಗಣೇಶ್​ ಶಿವರಾಮ್​ ಶೆಟ್ಟಿ, ಚನ್ನಪ್ಪ ಮಲ್ಲಪ್ಪ ನಾಗನೂರ ಹಾಗೂ ಸಂತೋಷ್​ ಕಿಶನ್ ರಾಠೋಡ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...