ವಿಜಯಪುರ | ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂಪಡೆಯುವಂತೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಆಗ್ರಹ

Date:

ಹಾಲಿನ ದರ ಲೀಟರಿಗೆ ₹4, ವಿದ್ಯುತ್ ದರವನ್ನು ಯುನಿಟ್‌ಗೆ ₹35 ಹೈಸೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಲೀಟರಿಗೆ ₹2ನಂತೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವೂ ಎಲ್‌ಪಿಜಿ ಸಿಲಿಂಡರ್ ದರ ₹50 ಹಾಗೂ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹2 ಹೆಚ್ಚಿಸಿರುವ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ಮಾತನಾಡಿ, “ಹೈನುಗಾರರ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಎಂಬುದು ನಿಜವೇ. ಇದನ್ನು ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪಶು ಆಹಾರ, ಮೇವು, ಪಶು ವೈದ್ಯಕೀಯ ವೆಚ್ಚ ಮೊದಲಾದ ಹೈನುಗಾರಿಕೆಯ ಒಳಸುಳಿಗಳ ವೆಚ್ಚವನ್ನು ಸರ್ಕಾರ ಕಡಿತ ಮಾಡಬೇಕಿತ್ತು. ಬದಲಿಗೆ ಪ್ರತಿಬಾರಿಯೂ ವೆಚ್ಚದ ಹೊರೆಯನ್ನು ಸಾಮಾನ್ಯ ಗ್ರಾಹಕರ ಮೇಲೆ ವರ್ಗಾಯಿಸುತ್ತಲೇ ಇದೆ. ಇಂತಹ ನಡೆ ಸರಿಯಲ್ಲ” ಎಂದು ಆರೋಪಿಸಿದರು.

“ವಿದ್ಯುತ್ ದರವನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಸದ್ಯಕ್ಕೆ ಗೃಹಜ್ಯೋತಿ ಯೋಜನೆಯ ಕಾರಣಕ್ಕೆ ಇದರಿಂದ ಬಹುಪಾಲು ಗ್ರಾಹಕರಿಗೆ ಸಮಸ್ಯೆ ಆಗದೇ ಇರಬಹುದು. ಆದರೆ ವಾಣಿಜ್ಯ ಮತ್ತು ಸಣ್ಣ ಕೈಗಾರಿಕೆಗಳಿಗೆ ಇದು ಹೊರೆಯಾಗಲಿದೆ. ಕೆಎಂಎಫ್ ಮತ್ತು ವಿದ್ಯುತ್ ಕಂಪನಿಗಳ ದಕ್ಷತೆಯನ್ನು ಹೆಚ್ಚಿಸಿ, ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚ ನಿಯಂತ್ರಣ ಮಾಡುವ ಕಡೆಗೆ ಸರ್ಕಾರ ಗಮನಹರಿಸಬೇಕು. ಹಾಲು ಮತ್ತು ವಿದ್ಯುತ್ ದರ ಏರಿಕೆಗಳು ಸೇರಿದಂತೆ ಇತರ ಉತ್ಪನ್ನಗಳ ಮೇಲೆ ಪರಿಣಾಮ ಬೀರಿ ಬೆಲೆ ಏರಿಕೆಯ ವಿಷಚಕ್ರಕ್ಕೆ ಕಾರಣವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ಡಾ. ಸುನೀತಕುಮಾರ ಮಾತನಾಡಿ, “ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರವು ಏರಿಕೆ ಮಾಡಿರುವುದರಿಂದ ಲೀಟರ್‌ಗೆ ₹2 ಹೆಚ್ಚಳವಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿಯ ಸುಂಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶೇ.5ರಷ್ಟು ಏರಿಕೆ ಮಾಡಿದೆ. ಡೀಸೆಲ್ ಮತ್ತು ಹೆದ್ದಾರಿಗಳೆರಡೂ ಸಾರ್ವಜನಿಕ ಸಾರಿಗೆ ಮತ್ತು ಸರಕು ಸಾಗಾಣಿಕೆಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಪ್ರಯಾಣ ದರಗಳು, ಸಾಗಾಣಿಕೆ ವೆಚ್ಚ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ತುಟ್ಟಿಯಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

“ಇನ್ನೊಂದೆಡೆ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಮ್ಮ ಶಾಸಕರು ಹಾಗೂ ಸಂಸದರ ವೇತನವನ್ನು ದುಪ್ಪಟ್ಟು ಮಾಡಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ಒಲೈಸುವ ಸರ್ಕಾರಗಳು ಇನ್ನೊಂದು ಕಡೆಯಿಂದ ಬೆಲೆ ಏರಿಕೆಯ ಬರೆ ಹಾಕುವುದು ಖಂಡನೀಯವಾಗಿದೆ” ಎಂದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಶಿವಬಾಳಮ್ಮ ಕೊಂಡಗುಳ್ಳಿ, ಶಿವರಂಜನಿ ಹಾಗೂ ಸಿದ್ರಾಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...