ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

Date:

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಟ್ಟಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಸದುಪಯೋಗ ಪಡೆದುಕೊಳ್ಳುವುದೇ ಈ ಒಂದು ಬೆಂಬಲ ಸಭೆಯ ಉದ್ದೇಶವಾಗಿದೆ ಎಂದು ಶ್ರೀಮತಿ ಕಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಒಕ್ಕೂಟ ಹಾಗೂ ವಿಶೇಷ ಚೇತನರ ಒಕ್ಕೂಟ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆಯಲ್ಲಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಂದಾಯ ಇಲಾಖೆಯ ರತನ್ ಗೋಸಾವಿ ಮತನಾಡಿ, “ಇತ್ತೀಚಿಗೆ ವಯೋವೃದ್ದರು ಮತ್ತು ವಿಕಲಚೇತನರು ಕಚೇರಿಗೆ ಬಂದು ತಮ್ಮ ಸಮಸ್ಯೆ ಬಗ್ಗೆ ತಿಳಿಸುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಈ ರೀತಿ ಸಭೆಗಳನ್ನು ಮಾಡಿ ಸಂಸ್ಥೆಗಳ ಮೂಲಕ ತಮ್ಮ ಸಮಸ್ಯೆಗಳನ್ನು ನಮ್ಮ ಮುಂದೆ ಇಟ್ಟಿದ್ದು ತುಂಬಾ ಸಂತೋಷ. ಕಾರಣ ಇಲಾಖೆಗಳಿಗೆ ಓಡಾಡುವುದು ತುಂಬಾನೇ ಕಷ್ಟಕರ. ಹೀಗಾಗಿ ಪಿಂಚಣಿಗೆ ಸಂಬಂಧಪಟ್ಟ ಏನೇ ಸಮಸ್ಯೆಗಳಿದ್ದರೂ ನಮ್ಮೊಟ್ಟಿಗೆ ಚರ್ಚಿಸಿ ಒಂದು ಪಟ್ಟಿ ಮಾಡಿ ಸಂಸ್ಥೆ ಮೂಲಕ ನಮ್ಮ ಗಮನಕ್ಕೆ ತಂದರೆ ನಾನು ಸರಿಪಡಿಸುತ್ತೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಒಂದು ಬಡ ಕುಟುಂಬದಿಂದ ಬಂದಿರುವದರಿಂದ ತಮ್ಮ ಕಷ್ಟ ನನಗೆ ಅರ್ಥವಾಗುತ್ತದೆ. ಯಾವುದೇ ರೀತಿ ಸಂಕೋಚ ಪಟ್ಟುಕೊಳ್ಳದೆ ನಾನು ನಿಮ್ಮ ಮನೆ ಮಗನೆಂದು ತಿಳಿದು ಸಮಸ್ಯೆಯನ್ನು ಪರಿಹರಿಸಿಕೊಳ್ಳಿ” ಎಂದು ತಿಳಿಸಿದರು.

ಸುಮನ್ ಬಾಲು ಅಧ್ಯಕ್ಷೀಯ ಭಾಷಣ ಮಾಡಿ, “ಈ ಸಂದರ್ಭದಲ್ಲಿ ವಿಕಲಚೇತನರು ಮತ್ತು ವಯೋವೃದ್ಧರೇ ನಮಗೆ ಮಾದರಿಯಾಗಿದ್ದಾರೆ. ಅವರನ್ನು ನೋಡಿ ನಾವು ಅವರಿಂದ ಸಾಕಷ್ಟು ವಿಷಯಗಳನ್ನು ಹಾಗೂ ಜೀವನವನ್ನು ಯಾವ ರೀತಿ ರೂಪಿಸಿಕೊಳ್ಳಬೇಕೆಂದು ಸದ್ಯದ ಯುವಜನರು ಕಲಿಯಬೇಕಾಗಿದೆ. ಇಂತಹ ಅಧಿಕಾರಿಗಳು ಸಿಗುವುದು ತುಂಬಾ ಕಡಿಮೆ. ಹೀಗಾಗಿ ನಮ್ಮ ಅವರ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ” ಎಂದು ಸಲಹೆ ನೀಡಿದರು.

ವಿಜಯಪುರ ನಗರ ಒಕ್ಕೂಟ ಮತ್ತು ವಿಕಲಚೇತನರ ಒಕ್ಕೂಟದ ಮಾಸಿಕ ಬೆಂಬಲ ಸಭೆಯನ್ನು ಸಂವಿಧಾನದ ಪ್ರಸ್ತಾವನೆ ಹೇಳುವ ಮೂಲಕ ಪ್ರಾರಂಭಿಸಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | 25ನೇ ವರ್ಷದ ಮುಂಗಾರು ಸಾಂಸ್ಕೃತಿಕ ಹಬ್ಬ; ರಾಜ್ಯ ಮತ್ತು ತೆಲಂಗಾಣ ಸಿಎಂಗಳ ಆಹ್ವಾನಕ್ಕೆ ನಿರ್ಧಾರ

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಸಹ ನಿರ್ದೇಶಕ ಹಾಗೂ ಕಂದಾಯ ಇಲಾಖೆಯ ರತನ್ ಗೋಸಾವಿ, ಅನೌಪಚಾರಿಕ ಶಿಕ್ಷಣ ಸಂಸ್ಥೆ ಕಾರ್ಯ ಸಂಯೋಜಕಿ ಸಿಸ್ಟರ್ ಜಯ ಮೇರಿ, ಒಕ್ಕೂಟದ ಅಧ್ಯಕ್ಷೆ ಸುಶೀಲಾಬಾಯಿ ದಳವಾಯಿ, ಕಾರ್ಯದರ್ಶಿ ಲಾಲ್ ಸಾಬ್ ಮುಲ್ಲಾ, ವಿಕಲಚೇತನರ ಮುಖಂಡರಾದ ಮಲ್ಲಿಕಾರ್ಜುನ್, ಉಮರಾಣಿ ಮತ್ತು ಎಲ್ಲಮ್ಮ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...