ವಿಜಯಪುರ | ಸಿಂದಗಿ ತಾಲೂಕಿನ ಎರಡು ಗ್ರಾಮಗಳು ಆಲಮೆಲ ತಾಲೂಕಿಗೆ ಸೇರ್ಪಡೆಯಾಗಿರುವುದು ಅವೈಜ್ಞಾನಿಕ; ಅನಿರ್ದಿಷ್ಟಾವಧಿ ಧರಣಿ

Date:

ಗಾಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಆಲಮೇಲ ತಾಲೂಕಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗಪ್ಸಾಳ್ವಿಕೆ ಗ್ರಾಮದಲ್ಲಿ ಹೋರಾಟ ಸಮಿತಿ ಪ್ರಮುಖರು ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರವೂ ಮುಂದುವರೆದಿದೆ.

“ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯ ಎರಡು ಗ್ರಾಮಗಳನ್ನು ಆಲಮೆಲ ತಾಲೂಕಿಗೆ ಸೇರ್ಪಡೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಸಿಂದಗಿ ತಾಲೂಕು ಕೇಂದ್ರ ಕೇವಲ 12 ಕಿಮೀ ಹತ್ತಿರದಲ್ಲಿದೆ. ಆದರೆ ಆಲಮೆಲ 40 ಕಿಮೀ ದೂರದಲ್ಲಿದೆ. ಈ ಕುರಿತು ಈಗಾಗಲೇ ಹೋರಾಟ ನಿರಂತರವಾಗಿ ಮುಂದುವರಿದಿದೆ” ಎಂದು ಹೋರಾಟ ಸಮಿತಿ ಪ್ರಮುಖರು ಹೇಳಿದರು.

“ಮೊದಲನೇ ಹಂತದಲ್ಲಿ ಗ್ರಾಮದಿಂದ ಸಿಂದಗಿಯವರೆಗೂ ಬೈಕ್ ರ‍್ಯಾಲಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿ ಸಿಂದಗಿ ತಾಲೂಕಿನ ಎರಡು ಗ್ರಾಮಗಳನ್ನು ಮರು ಸೇರ್ಪಡೆ ಮಾಡಬೇಕೆಂದು ಆಗ್ರಹಿಸಲಾಗಿತ್ತು. ಎರಡನೇ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಸತ್ಯಾಗ್ರಹವನ್ನೂ ಮಾಡಲಾಗಿತ್ತು. ಇದೀಗ ಮೂರನೇ ಹಂತದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | 24 ಗಂಟೆಯಲ್ಲಿ ಕುಡಿಯುವ ನೀರು ಸರಬರಾಜು, ಮೇವು ಲಭ್ಯ: ಶಾಸಕ ವಿನಯ ಕುಲಕರ್ಣಿ

“ಮೂರನೇ ಹಂತದ ಪ್ರತಿಭಟನೆಗೂ ಸ್ಪಂದಿಸದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಅನಿವಾರ್ಯವಾಗುತ್ತದೆ” ಎಂದು ಹೋರಾಟಗಾರರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಹೋರಾಟದ ಪ್ರಮುಖರುಗಳಾದ ಬಾಬುಗೌಡ, ಕಾ ಬಿರಾದಾರ, ಪ್ರಭುಗೌಡ ಬಿರಾದಾರ, ಗಂಗಪ್ಪ ಗೌಡ ಬಿರಾದಾರ, ಸಾಹೇಬ ಗೌಡ ಬಿರಾದಾರ, ಶಿವಶರಣ ಹೇಳವಾರ, ಭೀಮನಗೌಡ ಬಿರಾದಾರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...