ವಿಜಯಪುರ | ʼಸಮುದಾಯದ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯʼ

Date:

ರೋಗ ಬರುವ ಮುಂಚೆಯೇ ಸಮುದಾಯದ ಜನರಿಗೆ ಮಾಹಿತಿ ನೀಡಿ ಅವರ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾದದ್ದು ಎಂದು ವಿಜಯಪುರ ತಾಲ್ಲೂಕು ಆರೋಗ್ಯಾಧಿಕಾರಿ ಎಸ್ ಡಿ ಕುಲಕರ್ಣಿ ಅಭಿಪ್ರಾಯಪಟ್ಟರು.

ಸಿಂದಗಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಸಮುದಾಯ ಸಂಘಟನೆ ಕುರಿತು ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದ ಅವರು, ʼರೋಗಗಳ ನಿಯಂತ್ರಣ, ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಸರಿಯಾದ ಸಮಯಕ್ಕೆ ಚಿಕಿತ್ಸೆ, ಶುದ್ಧ ನೀರು ಆಹಾರ ಸೇವನೆ ಸೇರಿದಂತೆ ಹಲವು ಮಾಹಿತಿಗಳನ್ನು ಸಮುದಾಯದ ಜನರಿಗೆ ಸಮಯಕ್ಕೆ ಸರಿಯಾಗಿ ತಲುಪಿಸುವುದರ ಜೊತೆಗೆ ಗರ್ಭಿಣಿ-ಬಾಣಂತಿಯರ ಆರೈಕೆಯಲ್ಲೂ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಸಾರ್ವಜನಿಕರೂ ಕೂಡ ಆಶಾ ಕಾರ್ಯಕರ್ತೆಯರು ನೀಡುವ ಮಾಹಿತಿಯನ್ನು ಪರಿಗಣಿಸಿ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದರು.

ಸಂಗಮ ಸಂಸ್ಥೆ ನಿರ್ದೇಶಕ ಫಾ. ಸಂತೋಷ್ ಮಾತನಾಡಿ,‌ ಇತ್ತೀಚಿನ ದಿನಮಾನಗಳಲ್ಲಿ ಹವಾಮಾನ ಬದಲಾವಣೆಯಿಂದ ಜನರ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಉಂಟಾಗುತ್ತಿದೆ. ಪ್ರಕೃತಿಯನ್ನು ಶುದ್ಧವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರ ಚೆನ್ನಾಗಿದ್ದರೆ ಜೀವಸಂಕುಲ ಆರೋಗ್ಯವಾಗಿರುತ್ತದೆ. ಪ್ರತಿಯೊಬ್ಬರೂ ಗಿಡ ಮರ ಬೆಳೆಸಿಕೊಳ್ಳುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾರ್ಮಿಕರ ಹಲ್ಲೆ ಪ್ರಕರಣ; ಶಿಸ್ತು ಕ್ರಮಕ್ಕೆ ಮನವಿ

ಕಾರ್ಯಾಗಾರದಲ್ಲಿ ವಿಜಯಕುಮಾರ ಬಂಟನೂರ, ತೇಜಸ್ವಿನಿ, ಮಲಕೃಪ ಹಲಗ್ನಿ, ಬಸವರಾಜ ಬಿಸನಾಳ, ರಾಜೀವ ಕುರಿಮನಿ, ಮಹೇಶ ಚವ್ಹಾಣ, ಉಮೇಶ, ಕಲಾವತಿ, ಸುಜಾತಾ, ಆಶಾ ಕಾರ್ಯಕರ್ತೆಯರು ಜನವೇದಿಕೆ ನಾಯಕರು, ಕಟ್ಟಡ ಕಾರ್ಮಿಕರು ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...