ವಿಜಯಪುರ | ʼಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕುʼ

Date:

ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಹೇಳಿದರು.

ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆವಿಷ್ಕಾರ, ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ಸಹಯೋಗದಲ್ಲಿ ನಡೆದ ʼ14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರೀ ಮಣ್ಣಲ್ಲ, ಕುರ್ಚಿಯಲ್ಲ. ಮನುಷ್ಯರಾದ ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು. ಇಂದು ಮುಖಂಡರು, ಅಧಿಕಾರಿಗಳು ಭ್ರಷ್ಟರಾಗುವ ಜತೆಗೆ ಲೇಖನ ಸಹ ಭ್ರಷ್ಟವಾಗಿದೆ. ಹೀಗಾದರೆ ರಕ್ಷಣೆ ಎಲ್ಲಿ. ನಮ್ಮನ್ನು ನಾವು ಕಂಡುಕೊಳ್ಳುವುದೇ ಇದಕ್ಕೆ ಪರಿಹಾರ. ತನ್ನ ಸಮುದಾಯವನ್ನೂ ಮೀರಿ ಜನಸಾಮಾನ್ಯರಿಗೆ ನಾಯಕರಾದ ಜ್ಯೋತಿಬಾ ಫುಲೆ ನಮಗೆ ಆದರ್ಶವಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಸೋಮಶೇಖರ ಮಾತನಾಡಿ, ”ನೀತಿ, ಸಂಸ್ಕೃತಿ, ಮೌಲ್ಯಗಳ ಅಭಿವೃದ್ಧಿ ನಿಜವಾದ ಅಭಿವೃದ್ಧಿ, ಇಂದಿನ ಸಮಾಜದ ಪ್ರಗತಿಗೆ ಪೂರಕವಾದುದನ್ನು ಮಾತ್ರ ನಾವು ಇತಿಹಾಸದಿಂದ ಅನುಸರಿಸಬೇಕು ಹೊರತು ಜನರನ್ನು ಒಡೆದು ಆಳುವ ಇತಿಹಾಸ, ಸಂಸ್ಕೃತಿಯನ್ನು ಅಲ್ಲ” ಎಂದರು.

WhatsApp Image 2025 04 13 at 4.44.49 PM 1

ರಂಗಮಂದಿರದ ಆವರಣದಲ್ಲಿಯ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಸಾಹಿತಿ ಮನು ಪತ್ತಾರ ಉದ್ಘಾಟಿಸಿದರು. ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಅಧ್ಯಕ್ಷತೆ ವಹಿಸಿದ್ದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ, ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಗೀತಾ ಎಚ್, ಆವಿಷ್ಕಾರದ ಮುಖಂಡ ಅಶೋಕ ದೇಸಾಯಿ ಇದ್ದರು.

ಇದನ್ನೂ ಓದಿ: ವಿಜಯಪುರ | ನೀರಿನ ಸಮಸ್ಯೆ ಬಗೆಹರಿಸಿ: ಶಾಸಕ ಯಶವಂತರಾಯ

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದುಷಿ ಲಕ್ಷ್ಮೀ ತೇರದಾಳಮಠ ಅವರ ನಾಟ್ಯ ಕಲಾ ಡ್ಯಾನ್ಸ್ ಕ್ಲಾಸ್ ನವರ ನೃತ್ಯ ರೂಪಕ, ಧಾರವಾಡ ಆಕಾಶವಾಣಿಯ ಬಿ ಹೈಗ್ರೇಡ್ ಕಲಾವಿದೆ ಕೃತಿಕಾ ವಿ. ಜಂಗಿನಮಠ ಅವರ ಕೊಳಲು ವಾದನ, ಸ್ವಯಂಭೋ ಆರ್ಟ್ ಫೌಂಡೇಶನ್‌ ನಟಿ ದೀಕ್ಷಾ ಭೀಸೆ, ದಿವ್ಯಾ ಭೀಸೆ ಮತ್ತು ತಂಡದವರ ನೃತ್ಯ ಪ್ರದರ್ಶನ ಜನರ ಮನ ಸೆಳೆದವು. ಬಾದಲ್ ಸರಕಾರ ಅವರು ರಚಿಸಿದ, ರಾಜೇಂದ್ರ ಕಾರಂತ್ ಅವರು ಕನ್ನಡಕ್ಕೆ ರೂಪಾಂತರಿಸಿದ ನಾಟಕ ‘ಮೋಜಿನ ಸೀಮೆಯಾಚೆ ಒಂದೂರು’ ವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...