ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ಅಮಾನವೀಯತೆ ಮೆರೆದ ಮಾಲೀಕ

Date:

ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರು ಹಲ್ಲೆಗೊಳಗಾಗಿದ್ದಾರೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಇಟ್ಟಂಗಿಭಟ್ಟಿ ಮಾಲೀಕನ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಗೆ ಈ ದಿನ.ಕಾಮ್‌ ಸಂಪರ್ಕಿಸಿದಾಗ, “ಮೂವರು ಕಾರ್ಮಿಕರು ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ತಡ ಮಾಡಿದ್ದಾರೆಂದು ಮಾಲೀಕ ಥಳಿಸಿರುವುದಾಗಿ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗಾಯಾಳುಗಳು ಸರ್ಕಾರಿ ಆಸ್ಪತ್ರೆ ದಾಖಲಾಗಿದ್ದು, ಅಲ್ಲಿಂದ ನಮಗೆ ಎಂಎಲ್‌ಸಿ(ಮೆಡಿಕೊ-ಲೀಗಲ್ ಕೇಸ್) ಬಂದಿದೆ. ಹಾಗಾಗಿ ನಮ್ಮ ಸಿಬ್ಬಂದಿ ಘಟನಾ ಸ್ಥಳಕ್ಕೆ ಹೋಗಿದ್ದಾರೆ” ಎಂದು ಪೊಲೀಸರು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜಾತಿನಿಂದನೆ : ರಟಕಲ್‌ ಪಿಎಸ್‌ಐ ಅಮಾನತು

“ಇನ್ನು ಎಫ್‌ಐಆರ್‌ ಆಗಿಲ್ಲ. ಸಂತ್ರಸ್ತ ಕಾರ್ಮಿಕರು ದೂರು ದಾಖಲು ಮಾಡಿದರೆ ಸಂಜೆಯಷ್ಟರಲ್ಲಿ ಎಫ್‌ಐಆರ್‌ ದಾಖಲಿಸಲಾಗುತ್ತದೆ. ತನಿಖೆಗೆ ತೆರಳಿರುವ ಸಿಬ್ಬಂದಿ ಬಂದ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರುತ್ತದೆ” ಎಂದು ಮಾಹಿತಿ ನೀಡಿದರು.

ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ‌ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...