ವಿಜಯಪುರ | 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಅವರು ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ಇಂದು ಚಾಲನೆ ನೀಡಲಾದ ಒಟ್ಟು 112 ನೂತನ ನಗರ ಸಾರಿಗೆ ಬಸ್ ಗಳನ್ನು ನಗರ ಭೂ ಸಾರಿಗೆ ನಿರ್ದೇಶನಾಲಯ, (Directorate of Urban Land Transport (DULT)) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ವಾಹನಗಳನ್ನು ವಿಜಯಪುರ ವಿಭಾಗಕ್ಕೆ 27, ವಿಜಯನಗರಕ್ಕೆ 25, ಕಲಬುರಗಿಗೆ 25, ರಾಯಚೂರಿಗೆ 18, ಬಳ್ಳಾರಿಗೆ 10, ಬೀದರಕ್ಕೆ 04 ಮತ್ತು ಯಾದಗಿರಿಗೆ 03 ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಯೋಜನೆಯಡಿಯಲ್ಲಿ ಮುಂದಿನ ದಿನಗಳಲ್ಲಿ ಸೇರ್ಪಡೆಗೊಳ್ಳಲಿರುವ 30 ಬಸ್ ಗಳನ್ನು ಅವಶ್ಯವಿರುವ ವಿಭಾಗ/ಘಟಕಕ್ಕೆ ನಿಯೋಜಿಸಲು ತೀರ್ಮಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 56 ಪ್ರತಿಷ್ಠಿತ ವಾಹನಗಳ ಸೇರ್ಪಡೆ ಮಾಡಲಾಗುತ್ತಿದ್ದು, ಕಾರ್ಯಾದೇಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೊಸದಾಗಿ 56 ಪ್ರತಿಷ್ಠಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಅದರಲ್ಲಿ, 20 ಎಸಿ ಸ್ಲೀಪರ್, 20 ನಾನ್ ಎಸಿ ಸ್ಲೀಪರ್ ಮತ್ತು 16 ಎಸಿ ಸೀಟರ್ ವಾಹನಗಳಾಗಿರುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

ಅದೇ ರೀತಿ ಮುಂದಿನ ದಿನಗಳಲ್ಲಿ ಕ.ಕ.ರ.ಸಾ. ನಿಗಮಕ್ಕೆ ಹೊಸದಾಗಿ ಸೇರ್ಪಡೆಯಾಗಲಿರುವ 225 ವಿದ್ಯುತ್ ಚಾಲಿತ ವಾಹನಗಳನ್ನು ಸೇರಿಸಲಾಗುತ್ತಿದ್ದು, ಕಲಬುರಗಿ ಜಿಲ್ಲೆಗೆ 100, ವಿಜಯಪುರ ಜಿಲ್ಲೆಗೆ 75 ಮತ್ತು 50 ಬಸ್ಸುಗಳನ್ನು ಬಳ್ಳಾರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಸ್ಲಂ ನಿವಾಸಿಗಳ ಮೇಲೆ ಅಧಿಕಾರಿಗಳ ದರ್ಪ; 300 ಕುಟುಂಬಗಳು ಬೀದಿಪಾಲು

ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್, ವಿಜಯಪುರ ಶಾಸಕ ಬಸನಗೌಡ ಆರ್. ಪಾಟೀಲ್ ಯತ್ನಾಳ್, ನಾಗಠಾಣ ಕ್ಷೇತ್ರದ ಶಾಸಕ ಕಟಕದೊಂಡ ವಿಠ್ಠಲ, ಕಕರಸಾ ನಿಗಮದ ಅಧ್ಯಕ್ಷರಾದ ಅರುಣ್ ಕುಮಾರ್ ಎಂ.ವೈ. ಪಾಟೀಲ್, ಕಕರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸುಶೀಲ ಸೇರಿದಂತೆ ಮತ್ತಿತತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...