ವಿಜಯಪುರ | ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಎರಡು ದಿನಗಳ ಕಾರ್ಯಗಾರ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ, ‘ಎನ್‌ಸಿಟಿಇ ನಿಯಮಗಳು ಮತ್ತು ಮಾನದಂಡಗಳ ಹಿನ್ನೆಲೆಯಲ್ಲಿ ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಇದೇ 19, 20ರಂದು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಕನ್ನಡ ಭವನದಲ್ಲಿ 19ರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ನವದೆಹಲಿ ಎನ್‌ಸಿಟಿಇ ಎಸ್‌ಆರ್‌ಸಿ ಅಧ್ಯಕ್ಷೆ ಡಾ. ಮೀನಾ ಆರ್ ಚಂದಾವರ್ಕರ್ ಭಾಗವಹಿಸಲಿದ್ದು, ಮಹಿಳಾ ವಿವಿಯ ಹಂಗಾಮಿ ಕುಲಪತಿ ಶಾಂತಾದೇವಿ ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶಾಲಾ ಶಿಕ್ಷಣ ವಿಭಾಗದ ಡೀನ್ ಮತ್ತು ಅಧ್ಯಕ್ಷ, ಪ್ರೊ. ಜಿ ಆರ್ ಅಂಗಡಿ, ಗೌರವ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಶಿಕ್ಷಣ ವಿಭಾಗದ ಡೀನ್ ಪ್ರೊ. ಸಕ್ಸಾಲ್ ಹೂವಣ್ಣ, ಬಿಪಿಎಸ್ ಅಧ್ಯಕ್ಷ ಪ್ರೊ. ಬಸವರಾಜ ಎಲ್ ಲಕ್ಕಣ್ಣವರ್ ಭಾಗವಹಿಸಲಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಗಾರದಲ್ಲಿ ವಿವಿಧ ತಜ್ಞರು ವಿಶೇಷ ಉಪನ್ಯಾಸ ನೀಡಲಿದ್ದು, ಗುಂಪು ಚರ್ಚೆ ಮತ್ತು ಸಂವಾದಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾನಪದ ಎಂಬುದು ಸಾವಿಲ್ಲದ ಗಾಯನ: ಟಿಎಚ್‌ಎಂ ಬಸವರಾಜ್

ಸಮಾರೋಪ ಸಂಮಾರಂಭ: ಜೂನ್ 20ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಶಿಕ್ಷಣ ನಿಖಾಯದ ಡೀನ್ ಪ್ರೊ.ಸಕ್ಸಾಲ್ ಹೂವಣ್ಣ, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಬಸವರಾಜ ಎಲ್ ಲಕ್ಕಣ್ಣವರ್, ಪ್ರೊ.ವೆಂಕೋಬ ನಾರಾಯಣಪ್ಪ, ಪ್ರೊ.ಎಂ ಶಿಂಧೆ, ಪ್ರೊ. ಯು ಕೆ ಕುಲಕರ್ಣಿ, ಪ್ರೊ. ಎ ಬಿ ಸುರಪುರ, ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ ಸೌಭಾಗ್ಯ, ಡಾ. ಪ್ರಕಾಶ್, ವೈ ಸಣ್ಣಕ್ಕನವರ್ ಸೇರಿದಂತೆ ಇತರರು ಇರಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...