ವಿಜಯಪುರ | ವಿ.ಶ್ರೀನಿವಾಸ್ ಪ್ರಸಾದ ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕ: ರಾಜು ಆಲಗೂರ್

Date:

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಹೇಳಿದರು.

ಸೋಮವಾರ (ಏ.29) ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ಅವರು, ಶ್ರೀನಿವಾಸ್‌ ಪ್ರಸಾದ್ ಅವರೊಂದಿಗಿದ್ದ ತಮ್ಮ ಸಂಬಂಧವನ್ನು ಮೆಲುಕು ಹಾಕಿದರು.‌

ಹಿಂದುಳಿದ ವರ್ಗದ ಹಿತ ಕಾಪಾಡಿದವರು ಶ್ರೀನಿವಾಸ್ ಪ್ರಸಾದ. ನಮಗೆ ಅವರು ದನಿಯಾಗಿದ್ದವರು. ಅವರೊಂದಿಗೆ ನನಗೆ ಉತ್ತಮ ಸಂಬಂಧವಿತ್ತು. ಅವರೊಬ್ಬ ಶ್ರೇಷ್ಠ ಸಂಸದೀಯ ಪಟುವಾಗಿದ್ದರು. ಮೊದಲ ಸಲ ನಾನು ಬಳ್ಳೊಳ್ಳಿ ಕ್ಷೇತ್ರದಲ್ಲಿ ನಿಂತಾಗ ನನ್ನ ಜತೆ ಶಕ್ತಿಯಾಗಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರು, ಅಲ್ಪಸಂಖ್ಯಾತರ ಪರ ಅವರ ಕಳಕಳಿ ಅಪಾರವಾಗಿತ್ತು. ಅಂತಹ ನಾಯಕ ಈಗ ಯಾರೂ ಇಲ್ಲ. ಹಿಂದೆ ನಮ್ಮೂರಿಗೆ ಕರೆಸಿ ಅವರಿಂದ ಭಾಷಣ ಮಾಡಿಸಿದ್ದೆ. ಚಳವಳಿಯ ದಿನಗಳಿಂದ ಜಿಲ್ಲೆಯಲ್ಲಿ ನಾನವರಿಗೆ ಒಡನಾಡಿಯಾಗಿದ್ದೆ. ಆರು ಸಲ ಸಂಸದರಾಗಿ, ಶಾಸಕರಾಗಿ ಅವರು ಜೀವಪರವಾಗಿ ಮಿಡಿದಿದ್ದಾರೆ ಎಂದು ಆಲಗೂರ ಅವರು ಹೇಳಿದರು.

ಪಿಂಜಾರಾ ಸಮುದಾಯ ಬೆಂಬಲ

ಇದೇ ವೇಳೆ ಪಿಂಜಾರಾ ಹಾಗೂ ನದಾಫ್ ಸಮಾಜ ಬಾಂಧವರು ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂರಾರು ಜನ ಭಾಗವಹಿಸಿದ್ದರು. ನಮ್ಮ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ನಮ್ಮ ಏಳ್ಗೆಗಾಗಿ ಉತ್ತಮ ಅಭ್ಯರ್ಥಿಯಾದ ಆಲಗೂರರಿಗೆ ಬೆಂಬಲಿಸುತ್ತಿರುವುದಾಗಿ ಹೇಳಿದರು.

ಸಂಘದ ಅಧ್ಯಕ್ಷ ಅಯೂಬ್ ಖಾನ್ ನದಾಫ್, ಕಾರ್ಯದರ್ಶಿ ಮೌಲಾಸಾಬ ಲಾಲಸಾಬ, ಮೀರಾ ನದಾಫ್, ಮೆಹಬೂಬ ಹತ್ತಳ್ಳಿ, ಅಬ್ದುಲ್ ಕರೀಮ್, ಅಬ್ದುಲ್ ಶಿವಣಗಿ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...