ವಿಜಯಪುರ | ನೇರ ನೇಮಕವಾದರೂ ಬೇಕು ಸಿಂಧುತ್ವ; ಶಿಕ್ಷಕ ಅಭ್ಯರ್ಥಿಗಳ ಪ್ರತಿಭಟನೆ

Date:

ಜಿಪಿಟಿ ಶಿಕ್ಷಕರ ನೇಮಕಾತಿ 2022ನೇ ಸಾಲಿನಲ್ಲಿ ಸಾಮಾನ್ಯ ವರ್ಗದ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು ಮೀಸಲಾತಿ ಪಡೆಯದೇ ಸಾಮಾನ್ಯ ವರ್ಗದಲ್ಲಿ ಆಯ್ಕೆ ಆದರೂ, ಅಧಿಕಾರಿಗಳು ಸಿಂಧುತ್ವ ಕೇಳುತ್ತಿರುವುದನ್ನು ಪ್ರಶ್ನಿಸಿ ವಿಜಯಪುರದ ಡಿಡಿಪಿಐ ಕಚೇರಿ ಎದುರು ನೂರಾರು ಶಿಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಸಾಮಾನ್ಯ ಕೆಟಗೆರಿಯಲ್ಲಿ ಆಯ್ಕೆ ಆದವರಿಗೆ ಸಿಂಧುತ್ವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳ ಆದೇಶವಿದ್ದರೂ, ಅಧಿಕಾರಿಗಳು ಸಿಂಧುತ್ವ ಕೇಳುತ್ತಿದ್ದಾರೆ. ಇದರಿಂದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಜಿಲ್ಲೆಯ 700ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಪ್ರತಿಭಟನಾನಿರತರು.

ರಾಜ್ಯ ನಾಗರಿಕ ಸೇವಾದ ಸಾಮಾನ್ಯ ವರ್ಗದ ಹುದ್ದೆಗಳಿಗೆ ಮೀಸಲಾತಿ ಪಡೆಯದೇ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಕಡ್ಡಾಯಗೊಳಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಅನುಸೂಚಿತ ಜಾತಿಗಳು, ಬುಡಕಟ್ಟುಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ, ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಕೆಲವೊಂದು ಸಮಸ್ಯೆಗಳನ್ನು ನಮಗೆ ತಿಳಿಸದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಕಾತಿ ಆದೇಶ ಪ್ರತಿ ನೀಡುತ್ತಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ತಕ್ಷಣವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಡಿಡಿಪಿಐ ಮೂಲಕ ಅಭ್ಯರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದರು.

2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದಲ್ಲಿ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರ ನೇಮಕಾತಿ ಆದೇಶ ಕೊಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಭಾವಿ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...