ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನಿಯಮ ಉಲ್ಲಂಘನೆ; ಸೂಕ್ತ ಕ್ರಮಕ್ಕೆ ಡಿವಿಪಿ ಆಗ್ರಹ

Date:

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು‌ ಪ್ರತಿಭಟನೆ ನಡೆಸಿದರು.

ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಿದ ವೇಳೆ ಅಕ್ಷಯಕುಮಾರ ಅಜಮನಿ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಪಿಇಟಿಸಿ ಸಂಸ್ಥೆ ನಡೆಸುವ ಪ್ರವೇಶ ಪರೀಕ್ಷೆ ಮೂಲಕ ಉತ್ತೀರ್ಣರಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ವಿಜಯಪುರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿರುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಯಾವ ರೀತಿಯಲ್ಲಿಯೂ ಸೂಕ್ತವಾದ ಅರ್ಹತೆ ಹೊಂದಿಲ್ಲ” ಎಂದು ಆರೋಪಿಸಿದರು.

“ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಯ್ಕೆಯಾದ ಪರೀಕ್ಷಾರ್ಥಿಗಳಿಗೆ ನಿಯಮದ ಪ್ರಕಾರ ತೆರಬೇತಿ ನೀಡದೇ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡು ಮೋಸ ನಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಈ ಸಂಸ್ಥೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಈ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ವತಿಯಿಂದ ನಡೆಯುವ ಪ್ರದೇಶ ಪರೀಕ್ಷೆಗೆ ಹಗಲು ರಾತ್ರಿ ಎನ್ನದೆ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಹಲವು ಕನಸುಗಳನ್ನು ಹೊತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಬರುತ್ತಾರೆ. ಆದರೆ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಉತ್ತಮ ತರಬೇತಿ ನೀಡುವಲ್ಲಿ ವಿಫಲವಾಗಿದೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

“ಪ್ರತಿಭಟನೆ ಬಳಿಕ ಸದರಿ ಸಂಸ್ಥೆಯ ಮೋಸದ ಜಾಲದ ಬಗ್ಗೆ ಗಂಭೀರವಾಗಿ ಗಮನಹರಿಸಿ, ಈ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಸಂಸ್ಥೆಗೆ ನೀಡಲಾದ ಅನುದಾನವನ್ನು ಮರಳಿ ಪಡೆಯುವ ಜೊತೆಗೆ ಟೆಂಡರ್ ರದ್ದುಗೊಳಿಸಬೇಕು. ಕಾನೂನಾತ್ಮಕವಾಗಿ ಇಲಾಖೆ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಹಾಗೂ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...