ಸ್ವಚ್ಛ, ಸುಂದರ, ಸದೃಢ ವಿಜಯಪುರಕ್ಕಾಗಿ ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಂದ ಮನವಿ ಬಂದಿರುವ ಹಿನ್ನೆಲೆ ಡಿಸೆಂಬರ್ 4, 5 ಹಾಗೂ 6 ರಂದು ಮೂರು ದಿನಗಳ ಕಾಲ ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಮೊದಲು ಬರುವ 1000 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಪರಿಸರಾಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ವಿಜಯಪುರ | ಮಹಿಳೆ ಆತ್ಮರಕ್ಷಣೆ ಕಲೆ ಕಲಿಯುವುದು ಅನಿವಾರ್ಯ: ಪ್ರೊ. ನಾಮದೇವಗೌಡ
ಈಗಾಗಲೇ 21 ಕಿ.ಮೀ ವಿಭಾಗದಲ್ಲಿ 538, 10 ಕಿ.ಮೀ ವಿಭಾಗದಲ್ಲಿ 264 ಹಾಗೂ 5 ಕಿ.ಮೀ ಓಟದಲ್ಲಿ 19,331 ಸೇರಿದಂತೆ ಒಟ್ಟು 20 ಸಾವಿರಕ್ಕೂ ಹೆಚ್ಚು ಓಟಗಾರರು ಆನಲೈನ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿದ್ದಾರೆ ಎಂದು ನೋಂದಣಿ ಸಮಿತಿಯ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚಟ್ಟಿ ಹಾಗೂ ವಿನಯ ಕಂಚ್ಯಾಣಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.





