ವಿಜಯಪುರ | ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಉಪನ್ಯಾಸಕ ಆಯ್ ವ್ಹಿ ರೋಡಗಿ

Date:

ಭೂಮಿಯಲ್ಲಿರುವ ಸಕಲ ಜೀವ ರಾಶಿಗಳಿಗೂ ನೀರು ಅಗತ್ಯವಾಗಿ ಬೇಕು. ಆದರೆ ಮನುಷ್ಯನು ನೀರನ್ನು ಬಳಸುವ ಪ್ರಮಾಣವು ಮಾತ್ರ ಹೆಚ್ಚಾಗಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯು ಕಾಡುತ್ತಿದೆ. ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ನೀರನ್ನು ಉಳಿತಾಯ ಮಾಡಲು ಈ ಕೆಲವು ಟಿಪ್ಸ್‌ಗಳನ್ನು ಪಾಲಿಸುವುದು ಉತ್ತಮ ಎಂದು ತಾಳಿಕೋಟಿಯ ಎಸ್ ಕೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ಉಪನ್ಯಾಸಕ ಆಯ್ ವ್ಹಿ ರೋಡಗಿ ಸಲಹೆ ನೀಡಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಜಿ ಆರ್ ಗಾಂಧಿ ಕಲಾ, ವಾಯ್ ಎ ಪಾಟೀಲ ವಾಣಿಜ್ಯ ಹಾಗೂ ಎಂ ಪಿ ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರಸಾಯನಶಾಸ್ತ್ರ ವಿಭಾಗದ ಅಡಿಯಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಜಲ ದಿನಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

“ನೀರು ಕುಡಿಯುವುದರಿಂದ ಹಿಡಿದು ದೈನಂದಿನ ಚಟುವಟಿಕೆಗಳಿಗೆ ನೀರಿನ ಬಳಕೆಯು ಹೆಚ್ಚಿದೆ. ನೀರಿನ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಂಶುಪಾಲ ಡಾ ಎಸ್ ಬಿ ಜಾಧವ ಮಾತನಾಡಿ, “ಬೇಸಿಗೆಕಾಲ ಆರಂಭವಾಗುತ್ತಿದ್ದಂತೆ ನೀರಿನ ಹಾಹಾಕಾರ ಕಾಣಿಸಿಕೊಳ್ಳುತ್ತದೆ. ದೈನಂದಿನ ಚಟುವಟಿಕೆಗಳಿಗೆ ಬಿಡಿ, ಕುಡಿಯುವುದಕ್ಕೂ ನೀರು ಇರುವುದಿಲ್ಲ. ಕಾಡಿನ ನಾಶದಿಂದ ಸರಿಯಾದ ಸಮಯಕ್ಕೆ ಮಳೆ ಬಾರದೆ ಹಳ್ಳ, ಕೊಳ್ಳ, ನದಿ ಸೇರಿದಂತೆ ಅದೆಷ್ಟೋ ಸಿಹಿ ನೀರಿನ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಸೃಷ್ಟಿಯಲ್ಲಿರುವ ಸಕಲ ಜೀವರಾಶಿಗಳಿಗೂ ಕುಡಿಯಲು ನೀರಿಲ್ಲದಂತಾಗಿದೆ” ಎಂದು ಹೇಳಿದರು.

“ನೀರನ್ನು ಮಿತವಾಗಿ ಬಳಸುವವರು ಕೆಲವೇ ಕೆಲವು ಜನರಷ್ಟೆ, ಹೀಗಾಗಿ ನೀರಿನ ಬಳಕೆಯಲ್ಲಿ ಸಣ್ಣ ಪುಟ್ಟ ಬದಲಾವಣೆಯನ್ನು ಮಾಡಿಕೊಂಡರೆ ನೀರನ್ನು ಉಳಿತಾಯ ಮಾಡುವುದು ಕಷ್ಟವೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ನ್ಯಾ. ವಿಶ್ವನಾಥ ಯಮಕನಮರಡಿ

ಉಪನ್ಯಾಸಕಿ ಶೃತಿ ಬಿರಾದಾರ, ಉಪನ್ಯಾಸಕ ಪರಶುರಾಮ ಅಜಮನಿ, ಉಪನ್ಯಾಸಕಿ ಶೃತಿ ಪಾಟೀಲ, ಡಾ ವಿಶ್ವಾಸ ಕೊರವಾರ, ಡಾ ಸುರೇಂದ್ರ ಕೆ, ಡಾ. ಸಿ ಎಸ್ ಬಿರಾದಾರ, ಡಾ.ಶ್ರೀಕಾಂತ ರಾಠೋಡ, ಮಲ್ಲಿಕಾರ್ಜುನ ಕೋಣದೆ, ಆರ್ ಪಿ ಇಂಗನಾಳ, ಪಂಕಜ ಕುಲಕರ್ಣಿ, ಬಲರಾಮ ವಡ್ಡರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...