ವಿಜಯಪುರ | ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ; ಸೂಕ್ತ ನಿರ್ವಹಣೆಗೆ ಡಿಸಿ ಭೂಬಾಲನ್‌ ಸೂಚನೆ

Date:

ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು ನಿಗದಿತ ಅಂತರವನ್ನು ತಲುಪುವಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ನಾರಾಯಣಪುರ ಜಲಾಶಯದಿಂದ ಪ್ರಸ್ತುತ ಹರಿಬಿಟ್ಟಿರುವ 1.50 ಟಿಎಂಸಿ ನೀರಿನೊಂದಿಗೆ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು ಪೋಲಾಗದಂತೆ ಮಿತವಾಗಿ ಬಳಸುವ ಕುರಿತು ಮತ್ತು ನೀರು ನಿಗದಿತ ಅಂತರವನ್ನು ತಲುಪುವಂತೆ ನಿಗಾ ವಹಿಸುವಂತೆ ಕಂದಾಯ, ಪೊಲೀಸ್, ನೀರಾವರಿ ಸ್ಥಳೀಯ ಸಂಸ್ಥೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಿದ್ದಾರೆ.

ವಾಚ್ ಅಂಡ್ ವಾರ್ಡ್ ಕೈಗೊಳ್ಳಲು ನಿಯೋಜಿತ ಅಧಿಕಾರಿ-ಸಿಬ್ಬಂದಿ ಕುಡಿಯುವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾದ ನೀರನ್ನು ಬೇರೆ ಉದ್ದೇಶಕ್ಕೆ ಬಳಸದಂತೆ ನಿಗಾ ವಹಿಸಬೇಕು. ಅನಧಿಕೃತ ಪಂಪ್‌ಸೆಟ್ ಕಂಡುಬಂದಲ್ಲಿ ಕರ್ನಾಟಕ ನೀರಾವರಿ ಕಾಯ್ದೆ-1965ರಂತೆ ಕ್ರಮಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳು ದೈನಂದಿನ ವರದಿ ಪಡೆದು, ನೀರಿನ ಸದ್ಬಳಕೆ ಕುರಿತು ಸಾಕ್ಷ್ಯಚಿತ್ರಗಳನ್ನು ಸಲ್ಲಿಸುವಂತೆ ಡಿಸಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

ನೀರು ಬಿಡುವ ದಿನಗಳಲ್ಲಿ ಕಾಲುವೆಗೆ ಎಡ-ಬಲ ಭಾಗಕ್ಕೆ ತಾಗಿದಂತೆ ಅಳವಡಿಸಿರುವ ರೈತರ ವಿದ್ಯುತ್ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಅಧಿಕಾರಿಗಳು ಕಡ್ಡಾಯವಾಗಿ ಕಡಿತಗೊಳಿಸಬೇಕು. ಸೋಲಾರ್ ಆಧಾರಿತ ಮೋಟಾರ್, ಜನರೇಟರ್‌ಗಳ ಸಂಪರ್ಕ ಸಹ ಕಡಿತಗೊಳಿಸಬೇಕು. ಕಾಲುವೆಗಳ ಮೇಲುಸ್ತುವಾರಿಗೆ ನೇಮಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...