ವಿಜಯಪುರ | ಬೇಸಿಗೆ ಬೇಗೆ ನೀಗಲು ಕೆರೆಗಳಿಗೆ ನೀರು: ಶಾಸಕ ಯಶವಂತರಾಯಗೌಡ

Date:

ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕಿನ ಸುಮಾರು 19 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ ಪಾಟೀಲ ಹೇಳಿದರು.

ಹೊರ್ತಿಯ ಅಗಸನಾಳ ಕಾಲುವೆ ಬಳಿ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ, ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯಡಿ ಜಾಕ್‌ವೆಲ್ ಮೂಲಕ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಕೆರೆಗಳಿಗೆ ನೀರು ಹರಿಸುವುದರಿಂದ ಅಂತರ್ಜಲ ಮಟ್ಟ, ಬಾವಿ ಹಾಗೂ ಬೋರವೆಲ್‌ಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ. ಇದರಿಂದ ಕುಡಿಯುವ ನೀರು ಮತ್ತು ಹೊಲ-ಗದ್ದೆಗಳಿಗೆ ನೀರು ಹರಿಸಲು ಅನೂಕೂಲ ಆಗಲಿದೆ. ಬೇಸಿಗೆಗೆ ನೀರಿನ ಅವಶ್ಯಕತೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿರುವುದರಿಂದ ನೀರಿನ ಕೊರತೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದರು.

WhatsApp Image 2025 02 05 at 9.58.36 AM 1

ಕಾರ್ಯಕ್ರಮಕ್ಕೂ ಮುನ್ನ ಇಂಡಿ ತಾಲೂಕಿನ ಹೊರ್ತಿ, ಕೊಳರಗಿ, ನಿಂಬಾಳ, ದೇಗಿನಾಳ, ಬಬಲಾದಿ, ಹಲಗುಣಕಿ, ಗುಂಡವಾನ, ಕೂಡಗಿ, ಸಾವಳಸಂಗ, ಸೋನಕನಹಳ್ಳಿ, ಹಡಲಸಂಗ ಮುಂತಾದ 13 ಕೆರೆಗಳು ಹಾಗೂ ಜಿಗಜಿಣಗಿ, ತಾಲೂಕಿನ ಸಾತಲಗಾಂವ, ಇಂಚಗೇರಿ, ಶಿಗಣಾಪುರ, ನಂದರಗಿ ಮುಂತಾದ ಕೆರೆಗಳು ಸೇರಿದಂತೆ ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯ ಜಾಕ್‌ವೆಲ್ ವೀಕ್ಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಶೋಷಿತರ ಗೌರವಯುತ ಬದುಕಿಗೆ ಅಂಬೇಡ್ಕರ್‌ ಕಾರಣ: ಚಿಂತಕ ರಂಜಾನ್ ದರ್ಗಾ

ಈ ವೇಳೆ ನಾಗಠಾಣ ಶಾಸಕ ವಿಠ್ಠಲ್ ಕಟಕದೊಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುರಣಗೌಡ ಪಾಟೀಲ, ಸದಸ್ಯ ಮಹಾದೇವ ಪೂಜಾರಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ನಾಯಕ, ಇಲಿಯಾಸ ಬೋರಾಮಣಿ, ರವಿದಾಸ, ಜಾಧವ, ಪ್ರಕಾಶಗೌಡ ಪಾಟೀಲ, ರೈತ ಮುಖಂಡ ಗುರುನಾಥ ಬಗಲಿ, ಮಲಗೌಡ ಬಿರಾದಾರ, ಕೃಷ್ಣಾ ಭಾಗ್ಯ ಜಲನಿಗಮ ನಿಗಮದ ಎಂಜಿನಿಯರ್‌ಗಳಾದ ಡಿ.ಬಸವರಾಜ, ಮಹೇಶ ರಿಯಾಜ್ ಬಾಗಲಕೋಟೆ, ಗೋವಿಂದ ರಾಠೋಡ, ಅಶೋಕ ರೆಡ್ಡಿ ಪಾಟೀಲ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...