ವಿಜಯಪುರ | ಮಹಿಳಾ ವಿವಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಕ್ರಮಕ್ಕೆ ಎಐಡಿಎಸ್‌ಒ ಆಗ್ರಹ

Date:

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್‌ಒ ಆಗ್ರಹಿಸಿದೆ.

ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ ಹೇಳಿಕೆ ನೀಡಿದ್ದು, “ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಇಂತಹ ಒಂದು ಹೀನಾಯ ಘಟನೆಯ ಆರೋಪ ಬಂದಿರುವುದು ಖಂಡನೀಯ. ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಎನ್ ಎಲ್ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಅಶ್ಲೀಲವಾಗಿ ನಿಂದಿಸಿದ್ದಾರೆಂಬ ಆರೋಪ ಬಂದಿದೆ” ಎಂದರು.

“ಹಲವಾರು ವಿದ್ಯಾರ್ಥಿನಿಯರು ಇಂತಹ ನೀಚ ಕೃತ್ಯಕ್ಕೆ ಭಯಪಟ್ಟು ಮಹಿಳೆಯರಿಗೆ ಭದ್ರತೆ ಬೇಕೆಂದೇ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಮಹಿಳಾ ವಿಶ್ವವಿದ್ಯಾಲಯಕ್ಕೆ ಸೇರಿಕೊಳ್ಳುತ್ತಾರೆ. ಇಲ್ಲಿಯೂ ಇಂತಹ ಘಟನೆ ನಡೆದಿರುವುದು ಆಘಾತಕಾರಿ. ಮತ್ತೆ ಇಂತಹ ಘಟನೆ ಮರುಕಳಿಸಬಾರದೆಂದರೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಾಡಬೇಕು. ಇಂತಹ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ವಿವಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪ

“ಘಟನೆಗೆ ಸಂಬಂಧಿಸಿದಂತೆ ಫೆಬ್ರವರಿ 27 ರಂದು ದೂರು ಸಲ್ಲಿಸಿದ್ದಾರೆಂದು ವರದಿಯಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಘಟನೆ ಬಗ್ಗೆ ಸೂಕ್ತವಾಗಿ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಕೆ ವಿಧಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...