ವಿಜಯಪುರ | ಮಹಿಳಾ ದಿನಾಚರಣೆ; ಅಕ್ಕಮಹಾದೇವಿ ವಿವಿಯಲ್ಲಿ ಸಾಂಸ್ಕೃತಿಕ ಹಬ್ಬ

Date:

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂಗಳದಲ್ಲಿ ಸಾಂಸ್ಕೃತಿಕ ಮೆರುಗು ಹೆಚ್ಚಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸಾಂಸ್ಕೃತಿಕ ಹಬ್ಬ ಎಲ್ಲರ ತನು-ಮನಸೆಳೆಯಿತು.

ವಿವಿಯಿಂದ ಹಮ್ಮಿಕೊಂಡ ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು ಜಾನಪದ, ದೇಶಭಕ್ತ ಸೇರಿದಂತೆ ಹಲವಾರು ನೃತ್ಯಗಳನ್ನು ಪ್ರದರ್ಶಿಸಿದರು. ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಭರತನಾಟ್ಯ, ಯೋಗನೃತ್ಯ, ಲವಣೆ, ಹಾಸ್ಯನೃತ್ಯಗಳು ವಿವಿಧ ಬಗೆಯ ನೃತ್ಯಗಳಲ್ಲಿ ಹಲವಾರು ವಿಭಾಗಗಳ ವಿದ್ಯಾರ್ಥಿನಿಯರು ಭಾಗಿಯಾಗಿ ಸಾಂಸ್ಕೃತಿಕ ಪಟ್ಟಕ್ಕೆ ಮೆರಗು ತಂದರು.

ಪ್ರತಿ ಸಾರಿಯಂತೆ ಈ ಬಾರಿಯೂ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಯ ಅಂಗಳದಲ್ಲಿ ಆಹಾರ ಮೇಳಕ್ಕೆ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಚಾಲನೆ ನೀಡಿದರು. ಈ ಆಹಾರ ಮೇಳದಲ್ಲಿ ವಿವಿಧ ವಿಭಾಗದ ವಿದ್ಯಾರ್ಥಿನಿಯರು ತಮ್ಮ ಮಳಿಗೆಗಳನ್ನು ಹಾಕಿಕೊಂಡು ಬಿಸಿಲಿನ ಬೇಗೆ ತಣಿಸುವ ತಂಪು ಲಿಂಬು ಪಾನೀಯ, ಮಸಾಲಾ ಮಜ್ಜಿಗೆ, ರಾಗಿ ಅಂಬಲಿ, ಫ್ರೂಟ್ ಸಲಾಡ್ ಸೇರಿದಂತೆ ವಿವಿಧ ಬಗೆಯ ಖ್ಯಾ‌ದ್ಯಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಹಲವಾರು ಜನರ ಆಹಾರ ಮಾಳಿಗೆಗಳಿಗೆ ಭೇಟಿ ನೀಡಿ ವಿವಿಧ ಬಗೆಯ ತಿಂಡಿ ಸವಿದು ಆನಂದಸಿದರು. ವಿಶೇಷವಾಗಿ ಆಹಾರ ಮೇಳದಲ್ಲಿ ಹಲವು ಬಗೆಯ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡಿ ಭೋಜನ ಪ್ರಿಯರನ್ನು ತಮ್ಮತ್ತ ಸೆಳೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 07 at 5.29.11 PM 1

ಪುಸ್ತಕ ಮಳಿಗೆ, ಬಟ್ಟೆ ಮಳಿಗೆ ಮತ್ತು ಮಹಿಳೆಯರ ಅಂದವನ್ನು ಹೆಚ್ಚಿಸುವ ವಿವಿಧ ಬಗೆಯ ಆಭರಣ, ಬಟ್ಟೆಗಳು ಮಹಿಳೆಯರ ಕಣ್ಮನ ಸೆಳೆಯುವಂತಿದ್ದವು. ಮನೆಯ ಅಂದವನ್ನು ಹೆಚ್ಚಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಸಹಾಯಕಾರಿಯಾಗುವಂತಹ ಸಸಿಗಳನ್ನು ಕೂಡ ಈ ಮೇಳದಲ್ಲಿ ಇಡಲಾಗಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ವಿಜಯಪುರ | ಆಲಮಟ್ಟಿ ಚಂದ್ರಮ್ಮದೇವಿ ಜಾತ್ರೆ ಆರಂಭ

ಮಹಿಳಾ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಸಂಘಟಿಸುತ್ತಿರುವ ಸಮಿತಿಯ ಸದಸ್ಯೆ ಸಂಚಾಲಕಿ ಪ್ರೊ. ಲಕ್ಷ್ಮೀದೇವಿ ವೈ. ಮತ್ತು ಮಹಿಳಾ ಅಧ್ಯಯನ ವಿಭಾಗದ ತಂಡ ಹಾಗೂ ವಿವಿಧ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರನ್ನು, ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಕಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್. ಚಂದ್ರಶೇಖರ ಅವರು ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...