ವಿಜಯಪುರ | ವುಮೆನ್ ಮೀಡಿಯಾ ಕ್ಲಬ್ ಉದ್ಘಾಟನೆ

Date:

ವುಮೆನ್ ಮೀಡಿಯಾ ಕ್ಲಬ್ ಕೇವಲ ವಿಭಾಗ ಮತ್ತು ವಿಶ್ವವಿದ್ಯಾಲಯಕ್ಕೆ ಸೀಮಿತವಾಗಿರದೆ ಇದು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದು ಕೆನಡಾದ ಟೊರೊಂಟೊನ ಸಂವಹನ ತಜ್ಞೆ ಗೀತಾ ನಾಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಮಂಗಳವಾರ ಆಯೋಜಿಸಿದ್ದ ‘ವುಮೆನ್ ಮೀಡಿಯಾ ಕ್ಲಬ್ʼ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು, ಸಮಾಜದಲ್ಲಿ ಸ್ವತಂತ್ರವಾಗಿ ಮತ್ತು ಯಶಸ್ವಿಯಾಗಿ ಬದುಕಲು ವುಮನ್ ಮೀಡಿಯಾ ಕ್ಲಬ್ ಸಹಾಯ ಮಾಡಬೇಕು. ತರಬೇತಿಗಳು, ಕಾರ್ಯಾಗಾರಗಳು ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು. ಅವರು ಸ್ವಚ್ಛತೆ, ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ತಮ್ಮ ಕುಟುಂಬ ಹಾಗೂ ಸಮುದಾಯದಲ್ಲಿ ದಾರಿದೀಪವಾಗಿ ಕೆಲಸ ಮಾಡಲು ಪ್ರೇರಣೆ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಾನೂನು, ಸಂವಿಧಾನ ನಮ್ಮ ಧರ್ಮ ಗ್ರಂಥವಾಗಬೇಕು: ಹಿರಿಯ ವಕೀಲೆ ವಿಜಯಲಕ್ಷ್ಮಿ

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, “ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಆದರ್ಶ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ, ಆಧುನಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡು, ಅವರು ಮಾಡಿದ ಸಾಧನೆಯನ್ನು ಮೀರಿಸುವ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿನಿಯೂ ತನ್ನ ಸುತ್ತಲಿನ ಪ್ರಪಂಚವನ್ನು ವಿಶ್ವತವಾಗಿ ಅರಿಯಲು ಯತ್ನಿಸಬೇಕು. ಕೇವಲ ಒಂದೇ ವಿಷಯಕ್ಕೆ ಸೀಮಿತವಾಗದೆ, ಬೇರೆ ಬೇರೆ ವಿಷಯಗಳಲ್ಲಿ ಜ್ಞಾನವನ್ನು ಸಂಪಾದಿಸುವುದು ಅತ್ಯಗತ್ಯವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...