ವಿಜಯಪುರ | ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮಹಿಳಾ ಸಂಘಟನೆ ರಚನೆ: ಗೀತಾ ಎಚ್ ಟಿ

Date:

ಮಹಿಳೆಯರ ಜ್ವಲಂತ ಸಮಸ್ಯೆಗಳಾದ ಬಾಲ್ಯವಿವಾಹ, ಭ್ರೂಣಹತ್ಯೆ, ಲಿಂಗ ತಾರತಮ್ಯ, ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ, ಅಪೌಷ್ಟಿಕತೆ, ಅಭದ್ರತೆ ಹಾಗೂ ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಎಲ್ಲ ಸ್ಥರದ ಮಹಿಳಾ ಸಮುದಾಯವನ್ನು ಸಂಘಟಿಸುತ್ತಿದೆ ಎಂದು ಮಹಿಳಾ ಸಂಘಟನೆ ವಿಜಯಪುರ ಜಿಲ್ಲಾ ಅಧ್ಯಕ್ಷೆ ಗೀತಾ ಎಚ್ ಟಿ ಹೇಳಿದರು.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಜಿಲ್ಲಾ ಕಾರ್ಯದರ್ಶಿ ಶಿವ ಬಾಳಮ್ಮ ಕೊಂಡಗುಳಿ ಮಾತನಾಡಿ, “ದೇಶಾದ್ಯಂತ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಘೋರ ಅತ್ಯಾಚಾರ, ಗುಂಪು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ತಾರ್ಕಿಕ ಹಂತಕ್ಕೆ ತಲುಪಲು ದೀರ್ಘಕಾಲ ತೆಗೆದುಕೊಳ್ಳುವುದು, ಹಲವು ಪ್ರಕರಣಗಳಲ್ಲಿ ಪ್ರಭಾವಿ ಆರೋಪಿಗಳು ಖುಲಾಸೆಯಾಗಿರುವುದು ಅಥವಾ ನಿಜವಾದ ಆರೋಪಿಗಳು ಸಿಗದೇ ಇರುವುದು ಸಾರ್ವಜನಿಕರಲ್ಲಿ ಸಿಟ್ಟು ಮಡುಗಟ್ಟುವಂತೆ ಮಾಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಇಂದಿಗೂ ಕದ್ದುಮುಚ್ಚಿ ನಡೆಯುತ್ತಿರುವ ಭ್ರೂಣಹತ್ಯೆಯ ಘಟನೆಗಳು ಸಮಾಜದಲ್ಲಿರುವ ಹಳೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ. 2024-25ರ ಅವಧಿಯಲ್ಲಿ 700ಕ್ಕೂ ಹೆಚ್ಚು ಬಾಲ್ಯವಿವಾಹಗಳು ವರದಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ(2023-ಜುಲೈ 2025) 80,813 ಬಾಲ ಗರ್ಭಿಣಿ ಪ್ರಕರಣಗಳು(ಆರ್‌ಸಿಎಚ್ ಪೋರ್ಟಲ್) ಪತ್ತೆಯಾಗಿರುವುದು ಆತಂಕವನ್ನು ಮೂಡಿಸಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಹಣಕಾಸು ದುರುಪಯೋಗ ಆರೋಪ:‌ ಪಿಡಿಒ ಅಬ್ದುಲ್‍ ರಜಾಕ್ ಮನಿಯಾರ ಅಮಾನತು

“ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ಮೇಲೆ ಪ್ರಸ್ತಾಪಿಸಿರುವ ಹಲವಾರು ಸಮಸ್ಯೆಗಳ ಕುರಿತು ರಾಜ್ಯದ ಮಹಿಳೆಯರ ಧ್ವನಿಯಾಗಿ AIMSS ರಾಜ್ಯ ಸಮಿತಿಯು ಈ ಮೂಲಕ ಒತ್ತಾಯಿಸುತ್ತಿದ್ದು, ಪರಿಹಾರವನ್ನು ನಿರೀಕ್ಷಿಸುತ್ತಿದೆ” ಎಂದರು.

ಈ ವೇಳೆ ಜಿಲ್ಲಾ ಜಂಟಿ ಕಾರ್ಯದರ್ಶಿ ಶಿವರಂಜನಿ, ಲಲಿತ ಬಿಜ್ಜರಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...