ತುಮಕೂರಿನ ಮಾಧ್ಯಮ ಹಬ್ಬದಲ್ಲಿ ಚಾಂಪಿಯನ್ಸ್‌ ಆದ ವಿಜಯಪುರ ಮಹಿಳಾ ವಿವಿ ವಿದ್ಯಾರ್ಥಿನಿಯರು

Date:

ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಇಂಪ್ರೆಶನ್-2025’ ಮಾಧ್ಯಮ ಹಬ್ಬದಲ್ಲಿ ವಿಜಯಪುರ ನಗರದ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರು “ಸಮಗ್ರ ಚಾಂಪಿಯನ್‌ಶಿಪ್” ಗೆದ್ದು ಬೀಗಿದ್ದಾರೆ.

ತುಮಕೂರಿನಲ್ಲಿ ಎರಡು ದಿನಗಳ ಕಾಲ ನಡೆದ ʼಇಂಪ್ರೆಶನ್-2025′ ಮಾಧ್ಯಮ ಹಬ್ಬದಲ್ಲಿ ಮಾಧ್ಯಮಕ್ಕೆ ಸಂಬಂಧಿಸಿದ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ 30ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಸ್ಪರ್ಧೆಗಳಲ್ಲಿ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರು ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

ಬಹುಮಾನಗಳ ವಿವರ: ಜ್ಯೋತಿ ಎಸ್- ಟಿವಿ ಸುದ್ದಿ ನಿರೂಪಣೆ (ಪ್ರಥಮ), ಶಿಲ್ಪಾ ಪವಾರ- ಪುಟ್ಟಕತೆ (ಪ್ರಥಮ), ಅಸ್ಮಾ ಪಲ್ಟನ್- ರೀಲ್ಸ್ ನಿರ್ಮಾಣ (ಪ್ರಥಮ), ಜ್ಯೋತಿ ಎಸ್- ಪಿಟಿಸಿ (ತೃತೀಯ), ಬಸಮ್ಮಾ ಹಾಗೂ ಜ್ಯೋತಿ ಎಸ್ ಚರ್ಚಾಸ್ಪರ್ಧೆ (ದ್ವಿತೀಯ), ಮೇಘಪುಷ್ಪಾ, ವಿದ್ಯಾಶ್ರೀ, ಅನ್ನಪೂರ್ಣಾ, ರಾಜೇಶ್ವರಿ ಹಾಗೂ ರತ್ನಾಂಜಲಿ ಜಾಹೀರಾತು ನಿರ್ಮಾಣದಲ್ಲಿ (ತೃತೀಯ) ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಗ್ರ ಚಾಂಪಿಯನ್ ಗಳಿಸಿರುವ ವಿದ್ಯಾರ್ಥಿನಿಯರನ್ನು ಹಂಗಾಮಿ ಕುಲಪತಿ ಪ್ರೊ. ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಚಂದ್ರಶೇಖರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ತುಮಕೂರು | ಸರ್ಕಾರಿ ಭೂಮಿ ಪರಿವರ್ತನೆ ಆರೋಪ: ಡಿಸಿ ಶುಭ ಕಲ್ಯಾಣ್ ವಿರುದ್ಧ ದೂರು

ಈ ವಿದ್ಯಾರ್ಥಿನಿಯರ ತಂಡದ ಜತೆಗೆ ಸಹಾಯಕ ಪ್ರಾಧ್ಯಾಪಕಿ ಡಾ. ತಹಮೀನಾ ನಿಗಾರ ಸುಲ್ತಾನಾ, ಸಂದೀಪ್, ಅತಿಥಿ ಉಪನ್ಯಾಸಕಿ ಸುಷ್ಮಾ ಪವಾರ, ಫಿಲೋಮಿನಾ ಮತ್ತು ಪವಿತ್ರಾ ಕಂಬಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...