ವಿಜಯಪುರ | ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ಕಾರ್ಯಕ್ರಮ

Date:

ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇರುತ್ತವೆ. ಆ ಸಮಸ್ಯೆಗೆ ಹೆದರದೆ ಜೀವನದಲ್ಲಿ ಕುಗ್ಗದೆ ಅದನ್ನು ಎದುರಿಸಿ ಜೀವನ ಸಾಗಿಸಬೇಕು. ಅದೇ ರೀತಿ ನಮ್ಮ ಸುತ್ತ ಮುತ್ತಲೂ ಅನೇಕ ಜನರು ಈ ಆತ್ಮಹತ್ಯೆ ಮಾಡಿಕೊಳ್ಳುವ ಚಿಂತನೆಯಲ್ಲಿರುತ್ತಾರೆ. ಅಂತಹ ವಿಷಯಗಳು ನಮ್ಮ ನಿಮ್ಮ ಗಮನಕ್ಕೆ ಬಂದರೆ ಆ ವ್ಯಕ್ತಿಯ ಮನ ಪರಿವರ್ತನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಬೇಕು ಎಂದು ಫಾದರ್ ಸಂತೋಷ್ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಿಂದ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಕೆಲವೊಬ್ಬರಲ್ಲಿ ಗಾಬರಿ ಮತ್ತು ಆತಂಕದ ಕಾಯಿಲೆಗಳು ವಿವಿಧ ವಿಚಾರ ದುಗುಡ ಮಾನಸಿಕವಾಗಿ ಖಿನ್ನತೆಗೆ ಒಳಗಾದವರು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಸಹಾಯವಾಣಿ 14416ಕ್ಕೆ ಕರೆ ಮಾಡಿ ನಿಮ್ಮ ನಿಮ್ಮ ಸಮಸ್ಯೆಗಳನ್ನು ತಿಳಿಸಬೇಕು. ‌ಸಿಂದಗಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ತಿಂಗಳು ಮೊದಲನೆ ಮಂಗಳವಾರ ಮನೋ ವೈದ್ಯರು ಬರುತ್ತಾರೆ. ಅಲ್ಲಿಗೆ ಬಂದು ಅವರನ್ನು ಭೇಟಿ ನೀಡುವುದು ಸೂಕ್ತ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಕುಲಕರ್ಣಿ ಅತಿಥಿಯಾಗಿ ಮಾತನಾಡಿ, “ಅತ್ಮಹತ್ಯೆ ತಡೆಯಬೇಕೆಂದರೆ ನಾವು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನರು ಮುಕ್ತವಾಗಿ ಮಾನಸಿಕ ಆರೋಗ್ಯ ಮತ್ತು ಖಿನ್ನತೆಯ ಬಗ್ಗೆ ಮಾತನಾಡಬೇಕು. ಅಂತಹವರನ್ನು ಸಮಾಧಾನ ಮಾಡುವುದರಿಂದ ಒಂದು ಜೀವದ ಬಲಿಯನ್ನು ತಪ್ಪಿಸಬಹುದು. ಇದಕ್ಕೆ ನಾವು ನೀವೆಲ್ಲರೂ ಒಗ್ಗೂಡಿದರೆ ಮಾತ್ರ ಸಾಧ್ಯ” ಎಂದರು.

“ಮೊದಲು 2023ರ ಸೆಪ್ಟಂಬರ್ 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನವನ್ನು ಪ್ರಾರಂಭಿಸಲಾಯಿತು. ಪ್ರತಿವರ್ಷ ಏಳು ಲಕ್ಷಕ್ಕೂ ಹೆಚ್ಚು ಆತ್ಮಹತ್ಯೆಗಳು ಸಂಭವಿಸುತ್ತವೆ. ಈ ಎಲ್ಲ ಆತ್ಮಹತ್ಯೆಗೆ ಕುಟುಂಬದಲ್ಲಿ ಕಲಹ ಹಾಗೂ ವಿವಿಧ ಚಿಕ್ಕ ಚಿಕ್ಕ ಸಮಸ್ಯೆಗಳು ಕಾರಣವಾಗುತ್ತವೆ. ಸಾವೊಂದೇ ಪರಿಹಾರವಲ್ಲ. ಇದನ್ನು ತಪ್ಪಿಸಲು ನಾವು ಸರಿಯಾದ ಮಾರ್ಗದರ್ಶನ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಇದ್ದೂ ಸತ್ತಂತಿದೆ ‘ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’

ಕಾರ್ಯಕ್ರಮದಲ್ಲಿ ಅಥಿತಿಗಳ ಸ್ಥಾನವಹಿಸಿರುವ ಸಂಗಮ ಸಂಸ್ಥೆಯ ಸಹನಿರ್ದೇಶಕ ಸಿಸ್ಟರ್ ಸಿಂತಿಯಾಡಿ ಮೆಲ್ಲೊರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ವಿವಿಧ ಹಳ್ಳಿಯಿಂದ ಮಹಿಳೆಯರು, ಯುವಕರು, ಕಟ್ಟಡ ಕಾರ್ಮಿಕರು, ವಿಶೇಷ ಚೇತನರು ಮತ್ತು ಸಂಗಮ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...