ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಹಿರಿಯೂರು ತಾಲೂಕು ತಹಶೀಲ್ದಾರರ ಮೂಲಕ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಮುಖಂಡರು “ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿದರು. ಕೂಡಲೇ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು
ಈ ವೇಳೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಮಚಂದ್ರ ಕೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್, ಜಿಲ್ಲಾಧ್ಯಕ್ಷ ಶಿವರಾಜಕುಮಾರ್ ಆರ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣ್ ರಾವ್, ಆಟೋ ಕೆಂಚಪ್ಪ , ಹಿರಿಯೂರು ತಾಲೂಕು ಅಧ್ಯಕ್ಷ ಓಂಕಾರ್ ಮೂರ್ತಿ (ದೊಡ್ಡಘಟ್ಟ), ತಾಲೂಕು ಕಾರ್ಯಾಧ್ಯಕ್ಷ ಆಟೋ ರಂಗಸ್ವಾಮಿ, ತಾಲೂಕು ಆಟೋ ಘಟಕದ ಅಧ್ಯಕ್ಷ ರಮೇಶ್, ತಾಲೂಕು ಕಾರ್ಯದರ್ಶಿ ಅಶೋಕ (ಹರ್ತಿ ಕೋಟೆ) ಹಾಗೂ ದಲಿತ ಮುಖಂಡರಾದ ರಾಜಪ್ಪ, ಚಂದ್ರಣ್ಣ ಗಾಂಧಿನಗರ, ಹಾಗೂ ಇತರರು ಹಾಜರಿದ್ದರು.





